Breaking News

ಮಂತ್ರಾಲಯದ ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲು

Spread the love

ರಾಯಚೂರು: ಮಂತ್ರಾಲಯದ  ಬಳಿ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಹೈದ್ರಾಬಾದ್ ಮೂಲದ ಯುವನ ಚಂದ್ರ , ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23), ಉರವಕೊಂಡದ ಸಂಧ್ಯಾ (22)ನೀರುಪಾಲಾದವರು. ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಏರ್ಪಡಿಸಿದ್ದ ಸತ್ಯನಾರಾಯಣ ಪೂಜೆಗೆ ಬಂದಿದ್ದ ಸಂಬಂಧಿಕರು ದುರ್ಮರಣಕ್ಕೀಡಾಗಿದ್ದಾರೆ.

ಪೂಜೆಯ ಬಳಿಕ ನದಿಯಲ್ಲಿ ಈಜಲು ತೆರಳಿದ್ದ ವೇಳೆ ದುರ್ಘಟನೆ ನಡೆದಿದೆ. ನದಿಯಲ್ಲಿ ನೀರಿನ ಆಳ ತಿಳಿಯದೇ ಈಜಲು ತೆರಳಿ ನೀರುಪಾಲಾಗಿದ್ದಾರೆ. ಘಟನೆಯಲ್ಲಿ ಯುವತಿ ಅಪರ್ಣಾ ಪಾರಾಗಿದ್ದಾಳೆ. ಸ್ಥಳದಲ್ಲಿ ಪೊಲೀಸರು, ಮೀನುಗಾರರಿಂದ ಹುಡುಕಾಟ ನಡೆದಿದ್ದು ಧನುಷ್ ಮೃತ ದೇಹ ಪತ್ತೆಯಾಗಿದೆ. ಉಳಿದವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದಾರೆ. ನದಿಯಲ್ಲಿ ನೀರುಪಾಲಾದವರ ಹುಡುಕಾಟ ವೇಳೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಮಂತ್ರಾಲಯಂ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.


Spread the love

About Laxminews 24x7

Check Also

ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆ

Spread the loveಬೆಳಗಾವಿ: ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ