Breaking News

ಶಿವಮೊಗ್ಗ ಜಿಲ್ಲೆಯಾದ್ಯಂತ ಮರಳು, ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ

Spread the love

ಶಿವಮೊಗ್ಗ: ಜಿಲ್ಲೆಯ ಹಲವೆಡೆ ಮರಳು ಮತ್ತು ಕ್ವಾರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು  , ಮರಳು ಗಣಿಗಾರಿಕೆ ಹಾಗೂ ಸಂಗ್ರಹವನ್ನ ಪರಿಶೀಲಿಸಿದ್ದಾರೆ.

ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಣೆ ಸಂಬಂಧ ಸಾಲು ಸಾಲು ದೂರುಗಳು ಕೇಳಿಬಂದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ, ನಿಂಬೆಗೊಂದಿ, ಮಂಗೋಟೆ, ಸನ್ಯಾಸಿ ಕೊಡಮಗ್ಗಿ, ಹಾಡೋನಹಳ್ಳಿ, ಕೂಡಲಿ, ಮಂಡುವಳ್ಳಿ, ತೂದೂರು, ದಬ್ಬಣಗದ್ದೆ, ಹೊಸನಗರ ತಾಲೂಕಿನ ಹರಿದ್ರಾವತಿ, ಸಂಪಕಟ್ಟೆ ಮತ್ತು ಸಾಗರದ ಆವಿನಹಳ್ಳಿಯ ಕ್ವಾರಿಗಳ ಮೇಲೆ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ.

ಮರಳು ಕ್ವಾರಿಗಳೊಂದಿಗೆ ಶಿವಮೊಗ್ಗದ ಕುವೆಂಪುನಗರದಲ್ಲಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ದಾಳಿಯಲ್ಲಿ ಶಿವಮೊಗ್ಗ ಮತ್ತು ಚಿತ್ರದುರ್ಗದ ಲೋಕಾಯುಕ್ತ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಇತ್ತೀಚಿಗೆ ನಡೆದ ಕೆಡಿಪಿ ಸಭೆಯಲ್ಲೂ ಅಕ್ರಮ ಮರಳು ಸಾಗಾಟದ ವಿಚಾರ ಚರ್ಚೆಗೆ ಬಂದಿತ್ತು. ಈ ಬಗ್ಗೆ ವ್ಯಾಪಕವಾಗಿ ದೂರು ಕೇಳಿಬಂದ ಬೆನ್ನಲ್ಲೇ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಕನಿಷ್ಠ ವೇತನ ಹೆಚ್ಚಳ ವಿರೋಧಿಸಿ ಜೂನ್ 1ರಂದು ಬೃಹತ್ ಪ್ರತಿಭಟನೆ

Spread the loveಬೆಳಗಾವಿ: ಕರ್ನಾಟಕ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ಬೆಳಗಾವಿಯ ವಿವಿಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ