Breaking News

ನಕಲಿ ಫೇಸ್ ಬುಕ್ ಖಾತೆ ತೆರೆದು ʻಜಾರಕಿಹೊಳಿʼ ವಿರುದ್ಧ ಪೋಸ್ಟ್: ʻಸೈಬರ್ ಕ್ರೈಂʼ ಗೆ ದೂರು ದಾಖಲಿಸಿದ ತಳವಾರ

Spread the love

ಬೆಳಗಾವಿ: ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ ಸತೀಶ್‌ ಜಾರಕಿಹೊಳಿ ವಿರುದ್ದ ಅವಹೇಳನಕಾರಿ ಪೋಸ್ಟ್ ಹಾಕಿದ ಘಟನೆ ನಡೆದಿದ್ದು, ಈ ಕುರಿತು ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ಎಂಬುವರು ಬೆಳಗಾವಿ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.
ʻಕರುನಾಡ ಕುರುಬಗೌಡ್ರು ಹಾಗೂ ಬಂಡಾಯ ಧ್ವನಿʼ ಎಂಬ ನಕಲಿ ಫೇಸ್ ಬುಕ್ ಖಾತೆಯಲ್ಲಿ “ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯ ಅವರ ವಿರುದ್ದ 37 ಶಾಸಕರಿಂದ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಸಹಿ ಸಂಗ್ರಹ ಮಾಡಲಾಗಿದೆ” ಎಂಬ ಗಂಭೀರ ಆರೋಪ ಮಾಡಲಾಗಿದೆ. ಆದರೆ ಈ ಆರೋಪವನ್ನು ಸ್ವತಃ ಮಾಜಿ ಸಚಿವ ಸತೀಶ್ ಜಾರಕಿಹೊಳಿ ನಿರಾಕರಿಸಿದ್ದಾರೆ. ಹೀಗಾಗಿ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಇಲ್ಲಸಲ್ಲದ ಅಪವಾದ ಹೊರಿಸಿ ಅವರ ಹೆಸರು ಹಾಳು ಮಾಡಲು ನಕಲಿ ಫೇಸ್ ಬುಕ್ ಖಾತೆಯಲ್ಲಿ ಸಂಚು ರೂಪಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಇದರಲ್ಲಿ ಮುಖ್ಯವಾಗಿ ಕುರುಬ ಜನಾಂಗ ಮತ್ತು ವಾಲ್ಮೀಕಿ ಜನಾಂಗದ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಸಾರ್ವಜನಿಕರಲ್ಲಿ ಶಾಂತಿಭಂಗ ಮತ್ತು ದೊಂಬಿ ಉಂಟು ಮಾಡುವಂತೆ ಮಾಡಲು ಸುಳ್ಳು, ಸುದ್ದಿಗಳನ್ನು ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಶೀಘ್ರವೇ ಸುಳ್ಳು ಸುದ್ದಿ ಹರಡಿಸುವವರ ಹಾಗೂ ಈ ಎರಡು ನಕಲಿ ಫೇಸ್ ಬುಕ್ ಮಾಡಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೈಬರ್ ಕ್ರೈಂ ಠಾಣೆಗೆ ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಸರ್ಕಾರಿ ಸೌಲಭ್ಯ ಸದುಪಯೋಗವಾಗಲಿ

Spread the loveಯರಗಟ್ಟಿ: ಸರ್ಕಾರ ಕೃಷಿ ವಿಜ್ಞಾನಿಗಳಿಂದ ಸಂಸ್ಕರಿಸಿದ ಉತ್ತಮ ಬಿತ್ತನೆ ಬೀಜ ಸಬ್ಸಿಡಿಯಲ್ಲಿ ವಿತರಿಸುತ್ತಿದೆ. ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ