Breaking News

ಮಳೆಯಿಂದ ನಿರ್ಮಾಣ ಹಂತದ ಗೋಡೆ ಕುಸಿತ – ಇಬ್ಬರು ಕಾರ್ಮಿಕರು ದುರ್ಮರಣ

Spread the love

ಬೆಂಗಳೂರು: ಮಳೆಯಿಂದ ನೆನೆದಿದ್ದ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೊಮ್ಮಶಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ದ್ಯಾಮಪ್ಪ ಹಾಗೂ ಬಾಬುಲಾಲ್ ಮೃತ ಕಾರ್ಮಿಕರು. ಕಳೆದ ಎರಡು ದಿನದ ಮಳೆಯಿಂದ ನಿರ್ಮಾಣ ಹಂತದ ಗೋಡೆ ನೆನೆದಿತ್ತು. ಈ ಗೋಡೆಯನ್ನು ಮತ್ತೆ ನಿರ್ಮಾಣಕ್ಕೆ ಕಾರ್ಮಿಕರು ಮುಂದಾದಾಗ ಕುಸಿದಿದೆ. ಇದರಿಂದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಪಟೇಲ್ ಎಂಬವವರಿಗೆ ಸೇರಿದ ಸೈಟ್‌ನಲ್ಲಿ ಈ ಅವಘಡ ನಡೆದಿದೆ. ಇಬ್ಬರ ಮೃತದೇಹಗಳನ್ನು ನೆಲಮಂಗಲ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಚಿವ ಸಂಪುಟ ವಿಸ್ತರಣೆಗೆ ಸೋಮವಾರ ಶುಭ ಮುಹೂರ್ತ? – ಹೈಕಮಾಂಡ್ ಮುಂದೆ 2 ದಿನಾಂಕ ಪ್ರಸ್ತಾಪಿಸಿದ ಡಿಕೆಶಿ

Spread the loveನವದೆಹಲಿ: ಸಚಿವ ಸಂಪುಟ ವಿಸ್ತರಣೆ ಕಸರತ್ತು ನಡೆಯುತ್ತಿರುವ ಹೊತ್ತಿನಲ್ಲೇ ʻಕೈʼ ಶಾಸಕರ ದೆಹಲಿ  ಪರೇಡ್ ಶುರುವಾಗಿದೆ. ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ