Breaking News

ನೇಣುಬಿಗಿದುಕೊಂಡು ಉಪತಹಶೀಲ್ದಾರ್ ಆತ್ಮಹತ್ಯೆ – 4 ಪುಟದ ಡೆತ್‌ನೋಟ್ ಪತ್ತೆ

Spread the love

ಹಾಸನ: ನೇಣುಬಿಗಿದುಕೊಂಡು ಉಪತಹಶೀಲ್ದಾರ್  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ನಗರದ  ಬಿಎಂ ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಡೆದಿದೆ‌.

ತಿಮ್ಮಯ್ಯ (52) ಆತ್ಮಹತ್ಯೆಗೆ ಶರಣಾದ ಉಪತಹಶೀಲ್ದಾರ್. ಮೈಸೂರು ಜಿಲ್ಲೆ, ಸಾಲಿಗ್ರಾಮದಲ್ಲಿ ಉಪತಹಶೀಲ್ದಾರ್ ಆಗಿದ್ದ ತಿಮ್ಮಯ್ಯ, ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ನಿನ್ನೆ (ಮೇ 30) ಲಾಡ್ಜ್‌ನಲ್ಲಿ 4 ಪುಟದ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂಲತಃ ಕೊಡಗು ಜಿಲ್ಲೆಯವರಾದ ತಿಮ್ಮಯ್ಯ ಹಾಸನ ನಗರದ ಚನ್ನಪಟ್ಟಣದ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬಸ್ಥರೊಂದಿಗೆ ವಾಸವಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಸರ್ಕಾರಿ ಸೌಲಭ್ಯ ಸದುಪಯೋಗವಾಗಲಿ

Spread the loveಯರಗಟ್ಟಿ: ಸರ್ಕಾರ ಕೃಷಿ ವಿಜ್ಞಾನಿಗಳಿಂದ ಸಂಸ್ಕರಿಸಿದ ಉತ್ತಮ ಬಿತ್ತನೆ ಬೀಜ ಸಬ್ಸಿಡಿಯಲ್ಲಿ ವಿತರಿಸುತ್ತಿದೆ. ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ