Breaking News

ಬುದ್ದಿಮಾತು ಹೇಳಿದ್ದಕ್ಕೆ ಚಿಕ್ಕಪ್ಪನನ್ನೇ ಬಿಯರ್ ಬಾಟಲಿಯಿಂದ ತಿವಿದು ಹತ್ಯೆ

Spread the love

ಮಂಗಳೂರು: ಬುದ್ಧಿಮಾತು ಹೇಳಿದ್ದಕ್ಕೆ ಅಣ್ಣನ ಮಗ ತನ್ನ ಚಿಕ್ಕಪ್ಪನನ್ನು ಬಿಯರ್ ಬಾಟಲಿಯಿಂದ ತಿವಿದು ಹತ್ಯೆಗೈದಿರುವ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದಲ್ಲಿ ನಡೆದಿದೆ.

37 ವರ್ಷದ ಮಧುಸೂದನ್ ಕೊಲೆಯಾದ ದುರ್ದೈವಿ. ರಾಹುಲ್ ಕೊಲೆಗೈದ ಆರೋಪಿ.  ಮೇ 31ರ ರಾತ್ರಿ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಕೆಲಸದ ವಿಚಾರವಾಗಿ ಮಧುಸೂದನ್ ಅವರು ಆರೋಪಿ ರಾಹುಲ್‌ಗೆ ಬುದ್ಧಿವಾದ ಹೇಳಿದ್ದಾರೆ. ಇದರಿಂದ ಕೋಪಗೊಂಡ ರಾಹುಲ್ ಕಾರ್ಯಕ್ರಮದಿಂದ ಹೊರ ನಡೆದಿದ್ದಾನೆ.

ಕಾರ್ಯಕ್ರಮ ಮುಗಿದ ಬಳಿಕ ಮನೆ ಸಮೀಪ ಮಧುಸೂದನ್ ಮೇಲೆ ರಾಹುಲ್ ಏಕಾಏಕಿ ದಾಳಿ ನಡೆಸಿದ್ದಾನೆ. ಬಿಯರ್ ಬಾಟಲಿಯಿಂದ ಕುತ್ತಿಗೆಗೆ ತಿವಿದ ಪರಿಣಾಮ ಮಧುಸೂದನ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆಯ ಬಳಿಕ ರಾಹುಲ್ ಸ್ಥಳದಿಂದ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಧುಸೂದನ್ ಅವರನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಘಟನೆ ಸಂಬಂಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿ ರಾಹುಲ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ