Breaking News

ಕಾಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಜೂ.6ಕ್ಕೆ ಭಾರತಕ್ಕೆ ವಾಪಸ್‌ – ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ

Spread the love

ನವದೆಹಲಿ: ಕಾಕ್ರೋಚ್‌ ಜನತಾ ಪಕ್ಷದ  ಸಂಸ್ಥಾಪಕ ಅಭಿಜೀತ್‌ ದೀಪ್ಕೆ  ಜೂನ್‌ 6 ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂ.6 ರಂದು ಭಾರತಕ್ಕೆ ಹಿಂತಿರುಗಿ, ಪರೀಕ್ಷೆಗೆ ಸಂಬಂಧಿಸಿದ ದೋಷಗಳಿಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಬಿಡುಗಡೆ ಮಾಡಿದ ವೀಡಿಯೋದಲ್ಲಿ ದೀಪ್ಕೆ, ದೆಹಲಿಯಲ್ಲಿ ನಡೆಯಲಿರುವ ತಮ್ಮ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಬೆಂಬಲಿಗರು ಮತ್ತು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಜೂ.6 ರಂದು ವಿಮಾನ ನಿಲ್ದಾಣದಲ್ಲಿ ತಮ್ಮೊಂದಿಗೆ ಸೇರುವಂತೆ ಬೆಂಬಲಿಗರಿಗೆ ತಿಳಿಸಿದ್ದಾರೆ.

ಭಾರತದ ಸಂವಿಧಾನದ ಮಾರ್ಗವನ್ನು ಅನುಸರಿಸಿ ನಾವೆಲ್ಲರೂ ಒಗ್ಗೂಡಿ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಲು ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಸಮಯ ಬಂದಿದೆ. ನಾವು ಒಟ್ಟಾಗಿ ಧ್ವನಿ ಎತ್ತಿದರೆ, ಅವರು ಖಂಡಿತವಾಗಿಯೂ ನಮ್ಮ ಮಾತನ್ನು ಕೇಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ನಾನು ಶನಿವಾರ ಬೆಳಿಗ್ಗೆ ದೆಹಲಿಗೆ ಬರಲು ಎಂದು ನಿರ್ಧರಿಸಿದ್ದೇನೆ. ದಯವಿಟ್ಟು ವಿಮಾನ ನಿಲ್ದಾಣದಲ್ಲಿ ನನ್ನೊಂದಿಗೆ ಸೇರಿ ಮತ್ತು ನಾವು ಒಟ್ಟಿಗೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಹೋಗಿ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ಕೇಳೋಣ ಎಂದಿದ್ದಾರೆ.

ಪರೀಕ್ಷೆಯಲ್ಲಾದ ಲೋಪಗಳು ಮತ್ತು ವಿವಾದಗಳಿಂದಾಗಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ವೀಡಿಯೋದಲ್ಲಿ ದೀಪ್ಕೆ ಗಂಭೀರ ಆರೋಪ ಮಾಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ