Breaking News

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಯು.ಟಿ ಖಾದರ್

Spread the love

ಚಿಕ್ಕಬಳ್ಳಾಪುರ: ನನಗೆ ಸಚಿವ ಸ್ಥಾನ ಕೊಡುವುದು ಬಿಡುವುದು ಪಕ್ಷಕ್ಕೆ ಬಿಟ್ಟ ವಿಚಾರ ನಾನು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸಲು ದೆಹಲಿಗೆ  ಹೋಗುತ್ತಿಲ್ಲ. ನನ್ನ ಕ್ಷೇತ್ರದಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಮಂಗಳೂರಿಗೆ  ತೆರಳುತ್ತಿದ್ದೇನೆ ಎಂದು ಸ್ಪೀಕರ್ ಯು.ಟಿ ಖಾದರ್  ಹೇಳಿದರು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಡೋದು ಬಿಡೋದು ಪಕ್ಷಕ್ಕೆ ಬಿಟ್ಟ ವಿಚಾರ. ಹಿಂದೆ ಕೊಟ್ಟಾಗ ಒಳ್ಳೆಯ ಕೆಲಸ ಮಾಡಿದ್ದೇನೆ. ನಾನು ಶಾಸಕನಾಗಿ ಸದನ ವೀರ ಪ್ರಶಸ್ತಿ ಪಡೆದುಕೊಂಡಿದ್ದೆ. ಸಚಿವನಾಗಿದ್ದಾಗ ಒಳ್ಳೆಯ ಕೆಲಸ ಮಾಡಿ ರಾಷ್ಟ್ರ ಪ್ರಶಸ್ತಿಯೂ ಪಡೆದುಕೊಂಡಿದ್ದೇನೆ. ನನ್ನ ಕೆಲಸ ಗುರುತಿಸಿ ಸಿದ್ದರಾಮಯ್ಯನವರು ವಿರೋಧ ಪಕ್ಷದ ಉಪನಾಯಕನಾಗಿ ಮಾಡಿದ್ದರು. ಈಗ ಸ್ಪೀಕರ್ ಮಾಡಿದ್ದಾರೆ, ಒಳ್ಳೆ ಕೆಲಸ ಮಾಡುತ್ತಿದ್ದೇನೆ. ಮುಂದೆ ಏನು ಕೊಡುತ್ತಾರೆ ನೋಡೋಣ ಎಂದರು.

ನಾನು ಯಾವುದೇ ಸ್ಥಾನ ಬಯಸಿ ಪಡೆದವನಲ್ಲ. ಪಕ್ಷ ಏನೇ ತೀರ್ಮಾನ ಮಾಡಿದರೂ ಸಂತೋಷ, ಸಮಾಧಾನದಿಂದ ಇರುತ್ತೇನೆ. ನಾನು ದೆಹಲಿಗೆ ಹೋಗಲ್ಲ, ಮಂಗಳೂರಿಗೆ ಹೋಗುತ್ತಿದ್ದೇನೆ ಎಂದು ತಿಳಿಸಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ