Breaking News

ಕರ್ನಾಟಕದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಬೆಳವಣಿಗೆಗಳು ಬಿರುಸು ಪಡೆದುಕೊಂಡಿರುವ ಮಧ್ಯೆಯೇ ಇಂದಿನಿಂದ 4 ರಾಜ್ಯಸಭೆ, 7 ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಇಂದು ಎರಡೂ ಚುನಾವಣೆಗಳ ಅಧಿಸೂಚನೆ ಪ್ರಕಟವಾಗಿದೆ.

ಸಿಎಂ ಆಯ್ಕೆ, ಸಂಪುಟ ರಚನೆ ಒತ್ತಡದಲ್ಲಿ ಅಭ್ಯರ್ಥಿಗಳ ಆಯ್ಕೆ ಕಾಂಗ್ರೆಸ್‌ನಲ್ಲಿ ಈಗಾಗಲೇ ವಿಳಂಬವಾಗಿದೆ. ಜೂ.8ರಂದು ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಜೂ.11ರಂದು ನಾಮಪತ್ರಗಳ ವಾಪಸಾತಿಗೆ ಕೊನೇ ದಿನವಾಗಿದೆ. ಇನ್ನು ಜೂ.18ರಂದು ಮತದಾನ ನಡೆದು ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಇನ್ನೂ ಅಭ್ಯರ್ಥಿಗಳ ಆಯ್ಕೆಯನ್ನು ಕಾಂಗ್ರೆಸ್ ಮತ್ತು ಬಿಜೆಪಿ (BJP) ಫೈನಲ್ ಮಾಡಿಲ್ಲ. ಇನ್ನು 2, 3 ದಿನಗಳಲ್ಲಿ ಎರಡೂ ಪಕ್ಷಗಳಿಂದ ಅಭ್ಯರ್ಥಿಗಳ ಹೆಸರು ಫೈನಲ್ ಆಗುವ ಸಾಧ್ಯತೆ ಇದೆ. ರಾಜ್ಯಸಭೆಯ 4 ಸ್ಥಾನಗಳ ಪೈಕಿ ಕಾಂಗ್ರೆಸ್ 3, ಬಿಜೆಪಿ 1 ಗೆಲ್ಲಲು ಅವಕಾಶ ಇದೆ. ಪರಿಷತ್ ಸ್ಥಾನಗಳ ಪೈಕಿ ಕಾಂಗ್ರೆಸ್ 4, ಬಿಜೆಪಿ 2 ಸ್ಥಾನ ಸುಲಭ ಗೆಲುವು ಹಾಗೂ ಮತ್ತೊಂದು ಸ್ಥಾನಕ್ಕೂ ಕಾಂಗ್ರೆಸ್‌ನಿಂದಲೇ ಅಭ್ಯರ್ಥಿ ಕಣಕ್ಕೆ ಇಳಿಸಿ ಗೆಲ್ಲಿಸಿಕೊಳ್ಳಲು ಮುಂದಾಗಿದೆ.

ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಬೆಳಗಾವಿ ಬಿಜೆಪಿ ಮುಖಂಡ ಈರಣ್ಣ ಕಡಾಡಿ, ದಕ್ಷಿಣ ಕನ್ನಡ ಬಿಜೆಪಿ ಮುಖಂಡ ಕೆ.ನಾರಾಯಣ ಅವರ ಅವಧಿ ಜೂನ್ 25ರಂದು ಕೊನೆಗೊಳ್ಳಲಿದೆ. ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಚುನಾಯಿತರಾಗಿರುವ ಜೆಡಿಎಸ್‌ನ ಗೋವಿಂದ ರಾಜು, ಕಾಂಗ್ರೆಸ್‌ನ ನಸೀರ್ ಅಹಮದ್, ತಿಪ್ಪಣ್ಣಪ್ಪ ಕಮಕನೂರ ಹಾಗೂ ಬಿಕೆ ಹರಿಪ್ರಸಾದ್, ಬಿಜೆಪಿಯ ಎಂ.ಟಿ.ಬಿ ನಾಗರಾಜು, ಪ್ರತಾಪ್ ಸಿಂಹ ನಾಯಕ್, ಸುನಿಲ್ ವಲ್ಯಾಪುರೆ ಅವರ ಅವಧಿಯು ಜೂನ್ 30ರಂದು ಕೊನೆಗೊಳ್ಳಲಿದೆ.


Spread the love

About Laxminews 24x7

Check Also

ಕನಿಷ್ಠ ವೇತನ ಹೆಚ್ಚುವರಿ ಆದೇಶ ವಾಪಸ್ಸು ಪಡೆಯಲು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ

Spread the loveಬೆಳಗಾವಿ : ರಾಜ್ಯ ಸರ್ಕಾರದ ಕನಿಷ್ಠ ವೇತನ ಹೆಚ್ಚಳದ ತಿದ್ದುಪಡಿ ಆದೇಶವನ್ನು ವಿರೋಧಿಸಿ ನಗರದಲ್ಲಿ  ವಿವಿಧ ವ್ಯಾಪಾರ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ