Breaking News

ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ – ಜಮೀರ್‌ ಸವಾಲು

Spread the love

ಬೆಂಗಳೂರು: ರಾಜ್ಯದ ಕೆಲವು ಮಾಧ್ಯಮಗಳಲ್ಲಿ ಪ್ರಸಾರ ವಾಗುತ್ತಿರುವ ನನ್ನ ಕುರಿತ ಆಡಿಯೋ ನಕಲಿ, ಎಐ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಕಾಂಗ್ರೆಸ್‌  ನಾಯಕ ಜಮೀರ್ ಅಹಮದ್ ಖಾನ್  ತಿಳಿಸಿದ್ದಾರೆ.

ವೈರಲ್‌ ಆಗುತ್ತಿರುವ ಆಡಿಯೋ ಬಗ್ಗೆ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಹೇಳಿಯಲ್ಲಿ, ಇದೊಂದು ರಾಜಕೀಯ ಷಡ್ಯಂತ್ರ. ನಕಲಿ ಆಡಿಯೋ ಮಾಡಿ ವೈರಲ್ ಮಾಡಿರುವವರ ವಿರುದ್ಧ ಸೈಬರ್ ಠಾಣೆಗೆ ದೂರು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ನಾನು ಆ ರೀತಿ ಮಾತನಾಡಿಲ್ಲ. ಗೊಂದಲ ಉಂಟು ಮಾಡಲು ಇದೆಲ್ಲವೂ ಸೃಷ್ಟಿ ಮಾಡಲಾಗಿದೆ. ಇದು ಕಿಡಿಗೇಡಿಗಳ ಕೃತ್ಯ, ಇದನ್ನು ಯಾರೂ ನಂಬಬಾರದು. ಆಡಿಯೋ ಬಗ್ಗೆ ಯಾವ ತನಿಖೆಗೆ ಬೇಕಾದರೂ ಒಳಪಡಿಸಲಿ ಎಂದು ಸವಾಲು ಹಾಕಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ