Breaking News

ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಅನ್ನಪ್ರಾಶನ ಪೋಷಕಾಂಶ ಎಂಬ ಕಾರ್ಯಕ್ರಮ

Spread the love

ಬೆಳಗಾವಿ: ಕೆಎಲ್‌ ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಚಿಕ್ಕಮಕ್ಕಳ ವಿಭಾಗ ಹಾಗೂ ನ್ಯಾಶನಲ್‌ ಐವಾಯ್‌ ಸಿ ಎಫ್‌ ಚಾಪ್ಟರ ಆಫ್‌ ಐಎಪಿ ಇವುಗಳ ಸಂಯುಕ್ತಾಶ್ರಯದಲ್ಲಿ ಅನ್ನಪ್ರಾಶನ ಪೋಷಕಾಂಶ ಎಂಬ ವಿನೂತನ ಕಾರ್ಯಕ್ರಮ ನೆರವೇರಿಸುತ್ತಿದ್ದು ಅದರಂಗವಾಗಿ 6 ತಿಂಗಳಿಂದ 1 ವರ್ಷದವರೆಗಿನ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಇದೇ ದಿ. 3 ರಂದು ಬೆಳಗ್ಗೆ 9 ರಿಂದ 1 ಗಂಟೆಯವರೆಗೆ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದಲ್ಲಿ ಏರ್ಪಡಿಸಲಾಗಿದೆ.

ಮಕ್ಕಳ ಸರ್ವಾಂಗೀಣ ಅಭಿವೃದ್ದಿ ಕುರಿತು ತಿಳಿಸಿಕೊಡಲಿದ್ದು, ಮಕ್ಕಳ ತೂಕ, ಎತ್ತರ, ತಲೆಯ ಬೆಳವಣಿಗೆ, ಎದೆಹಾಲು ಉಣಿಸುವದು, ಹಾಲುಣಿಸುವ ನಿಯಮ ಮತ್ತು ಪ್ರಮಾಣ, ಪೂರಕ ಆಹಾರದ  ಕುರಿತು ಚುಚ್ಚುಮದ್ದು ಸೇರಿದಂತೆ ಅನೇಕ ವಿಷಯಗಳ ಕುರಿತು ತಪಾಸಣೆಯೊಂದಿಗೆ ಸೂಕ್ತ ಸಲಹೆಯನ್ನು ನೀಡಲಾಗುತ್ತದೆ. ಆದ್ದರಿಂದ 6 ತಿಂಗಳಿಂದ 1 ವರ್ಷದೊಳಗಿನ ಮಕ್ಕಳನ್ನು ತಪಾಸಣೆಗೆ ಕರೆದುಕೊಂಡು ಬರುವಂತೆ ಚಿಕ್ಕಮಕ್ಕಳ ತಜ್ಞವೈದ್ಯರಾದ ಡಾ. ರೂಪಾ ಬೆಲ್ಲದ ಅವರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಆಸ್ಪತ್ರೆಯ ಜನಸಂಪರ್ಕ ವಿಭಾಗ ಅಥವಾ 08312551116, 2551384 ಇಲ್ಲಿಗೆ ಸಂಪರ್ಕಿಸಲು ಕೋರಲಾಗಿದೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ