Breaking News

ಸದ್ಯಕ್ಕೆ ಶಾಲೆ ತೆರೆಯೋದಿಲ್ಲಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ

Spread the love

ಬೆಂಗಳೂರು): ಶಾಲೆಗಳನ್ನು ಆರಂಭಿಸುವ ಕುರಿತಾಗಿ ರಾಜ್ಯ ಸರ್ಕಾರವು ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ಸುರೇಶ್ ಕುಮಾರ್, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದ ಅಪೇಕ್ಷೆಯಂತೆ ಕರ್ನಾಟಕದಲ್ಲಿ ಸೆಪ್ಟೆಂಬರ್ ಮಾಹೆಯಲ್ಲಿ ಶಾಲೆಗಳನ್ನು ತೆರೆಯುತ್ತೇವೆಂದು ಸರ್ಕಾರವು ಅಭಿಪ್ರಾಯ ವ್ಯಕ್ತಪಡಿಸಿದೆಯೆಂದು ವರದಿಯಾಗಿರುವುದು ಸರ್ಕಾರದ ನಿರ್ಣಯವಾಗಿರುವುದಿಲ್ಲ. ನಮ್ಮ ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾಗ ವ್ಯಕ್ತಪಡಿಸಿರಬಹುದಾದ ಸಾಮಾನ್ಯ ಅಭಿಪ್ರಾಯವನ್ನು ಈ ರೀತಿಕೊರೋನಾ ಸಂದರ್ಭದಲ್ಲಿನ ಶಿಕ್ಷಣ ಕ್ಷೇತ್ರದ ಆದ್ಯತೆಗಳು‌ ಬೇರೆಯಿದ್ದು, ಅವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ‌ ರಾಜ್ಯ ಸರ್ಕಾರ ತನ್ನನ್ನು ತೊಡಗಿಸಿಕೊಂಡಿದೆ. ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದ ಮುಕ್ತ ವಾತಾವರಣದ ಸೃಷ್ಟಿಯಾದ ಮೇಲೆ ಮಾತ್ರ ಶಾಲೆಗಳಿಗೆ ಹಾಜರಾಗುತ್ತಾರೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ನಾವು ಯಾವುದೇ ಯೋಚನೆ, ನಿರ್ಣಯ ಕೈಗೊಂಡಿಲ್ಲ. ಬೇರಾವ ಅನಾವಶ್ಯಕ ಆತಂಕ ಬೇಡ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ

ಸದ್ಯಕ್ಕೆ ಶಾಲೆ ತೆರೆಯೋದಿಲ್ಲ, ಸರ್ಕಾರ ಯಾವುದೇ ನಿರ್ಣಯ ಕೈಗೊಂಡಿಲ್ಲ; ಮತ್ತೊಮ್ಮೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಆನ್‌ಲೈನ್ ಸಂವಾದ ಶಿಕ್ಷಣ ಕ್ಷೇತ್ರ ಕೋವಿಡ್ ಕಾಲಘಟ್ಟದಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಕುರಿತಂತೆ ಇಂದು ಮಾಜಿ ಶಿಕ್ಷಣ ಸಚಿವರುಗಳೊಂದಿಗೆ ಸಚಿವ ಸುರೇಶ್ ಕುಮಾರ್ ವಿಡಿಯೋ ಸಂವಾದ ನಡೆಸಿದರು. ತಂತ್ರಜ್ಞಾನವು ತರಗತಿ ಕಲಿಕೆಗೆ ಪರ್ಯಾಯವಲ್ಲವೆಂಬ ಅಂಶವನ್ನು ಎಲ್ಲರೂ ಪ್ರತಿಪಾದಿಸಿದರು.

ಆದರೆ ಇಂತಹ ಅನಿವಾರ್ಯ ಸಂದರ್ಭದಲ್ಲಿ ಅದರ ಸದ್ಬಳಕೆಯು ಎಲ್ಲ ವರ್ಗಗಳ ಮಕ್ಕಳಿಗೆ ಸಮಾನ ಶಿಕ್ಷಣವನ್ನು ದೊರಕಿಸಿಕೊಡಲು, ಮಕ್ಕಳ ಕ್ರಿಯಾಶೀಲತೆಯನ್ನು ಉತ್ತೇಜನಗೊಳಿಸಲು ಒಂದು ಸದವಕಾಶವಾಗಬೇಕು. ಸರ್ಕಾರ ತನ್ನ ಜವಾಬ್ದಾರಿಯನ್ನು ಈ ನಿಟ್ಟಿನಲ್ಲಿ ನಿರ್ವಹಿಸಬೇಕೆಂಬ ಅಭಿಪ್ರಾಯ ಸಂವಾದದಲ್ಲಿ ಮೂಡಿತು ಎಂದು ದಾಖಲಿಸಿದ್ದಾರೆ.

ಸರ್ಕಾರವು ಈ ಎಲ್ಲ ಸಲಹೆಗಳನ್ನು ತನ್ನ ನೀತಿ ನಿರೂಪಣೆಗೆ ಸಂಬಂಧಿಸಿದಂತೆ ಮುಕ್ತವಾಗಿ ಅವಲೋಕಿಸುತ್ತದೆ. ಎಲ್ಲರಿಗೂ ನನ್ನ ಹೃತ್ಪೂರ್ವಕವಾದ ಧನ್ಯವಾದಗಳನ್ನು ಸಲ್ಲಿಸಬಯಸುತ್ತೇನೆ ಎಂದೂ ಸಚಿವರು ಹೇಳಿದ್ದಾರೆ.ಈ ಆನ್ ಲೈನ್ ಸಂವಾದದಲ್ಲಿ ಡಾ.ಗುರುರಾಜ ಕರ್ಜಗಿ, ಡಾ.ವಿಪಿ ನಿರಂಜನಾರಾಧ್ಯ, ಅಜೀಂಪ್ರೇಮ್ ಜಿ ಫೌಂಡೇಶನ್ ನ ಶ್ರೀ ಹೃಷಿಕೇಶ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ