Breaking News

ಸಿಎಂ ಆದ ಬೆನ್ನಲ್ಲೇ ಕುಟುಂಬ ಸಮೇತರಾಗಿ ಅಜ್ಜಯ್ಯನ ಆಶೀರ್ವಾದ ಪಡೆದ ಡಿಕೆಶಿ

Spread the love

ಬೆಂಗಳೂರು: ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ ಶಿವಕುಮಾರ್‌ ಅವರು ನಾಗರಭಾವಿಯಲ್ಲಿರುವ ಅಜ್ಜಯ್ಯನ ಶಾಖಾ ಮಠಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದರು.

ಸತತ 2:15 ಗಂಟೆ ಅಜ್ಜಯ್ಯನ ಜೊತೆ ಮಾತುಕತೆ ನಡೆಸಿದರು. ಮುಂದಿನ ರಾಜಕೀಯ ನಡೆ, ಆಡಳಿತ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದರು. ಬಳಿಕ ಅಜ್ಜಯ್ಯನ  ಆಶಿರ್ವಾದ ಪಡೆದು ತೆರಳಿದರು.

ಕರ್ನಾಟಕದ  25ನೇ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್‌  ಅವರು ಬುಧವಾರ (ಜೂ.3) ಪ್ರಮಾಣ ವಚನ ಸ್ವೀಕರಿಸಿದರು. ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್  ಅವರು ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರದ ಚುಕ್ಕಾಣಿ ಹಿಡಿದಿದರು.

ಪ್ರಮಾಣವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ್‌ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದರು.


Spread the love

About Laxminews 24x7

Check Also

ಡಿ.ಕೆ. ಶಿವಕುಮಾರ್ ಸಿಎಂ: ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅದ್ಧೂರಿ ವಿಜಯೋತ್ಸವ

Spread the loveರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ ಗಡಿನಾಡು ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ