Breaking News
Home / ಜಿಲ್ಲೆ / ಕಲಬುರ್ಗಿ / ಕಲಬುರಗಿಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ

ಕಲಬುರಗಿಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ

Spread the love

ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್‍ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ ಹೊರಡಿಸಿದ್ದಾರೆ.

ಲಾಕ್‍ಡೌನ್ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ತೆರೆದು ಮುಚ್ಚತಕ್ಕದು. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳಿಗೆ ಈ ಸಮಯದ ನಿರ್ಬಂಧ ಅನ್ವಯವಾಗುವುದಿಲ್ಲ. ಅಲ್ಲದೆ ಭಾನುವಾರದ ಲಾಕ್ ಡೌನ್ ಗೂ ಈ ಆದೇಶ ಅನ್ವಯಿಸುವುದಿಲ್ಲ ಎಂದು ಡಿ.ಸಿ.ಶರತ್ ಬಿ. ಅವರು ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಕಲಬುರಗಿಯಲ್ಲಿ ಭಾನುವಾರ 69 ಹೊಸ ಕೊರೊನ ಪ್ರಕರಣಗಳು ದಾಖಲಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,743ಕ್ಕೆ ಏರಿಕೆಯಾಗಿದೆ. ಭಾನುವಾರ 80 ಜನ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ 926 ಸಕ್ರಿಯ ಪ್ರಕರಣಗಳಿವೆ. ನಿನ್ನೆ ಮೂವರನ್ನು ಕೊರೊನಾ ಬಲಿ ಪಡೆದಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿಂದ ಮರಣ ಹೊಂದಿದವರ ಸಂಖ್ಯೆ 46ಕ್ಕೇರಿಕೆಯಾಗಿದೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ