Breaking News

ಪ್ರವಾಸಿಗರ ವಿರುದ್ಧವೇ ಎಫ್‌ಐಆರ್ – ಎಡವಟ್ಟು ಮಾಡಿಕೊಂಡ ಪೊಲೀಸರು

Spread the love

ಮಡಿಕೇರಿ: ಪ್ರವಾಸಿಗರ ತಂಡದೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡ ಹೋಟೆಲ್ ಮಾಲೀಕನೊಬ್ಬ, ಬಳಿಕ ತಮ್ಮ ಮೇಲೆಯೇ ಹಲ್ಲೆ ನಡೆದಿದೆ ಎಂದು ದೂರು ನೀಡಿ ಪೊಲೀಸರನ್ನೇ ದಿಕ್ಕು ತಪ್ಪಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಬೆಂಗಳೂರು ಮೂಲದ ಯಾಸಿನ್ ಕುಟುಂಬ ಜೂನ್ ೨ರಂದು ಅಬ್ಬಿ ಜಲಪಾತ ವೀಕ್ಷಣೆಗೆ ಮಡಿಕೇರಿಗೆ ಬಂದಿತ್ತು. ವಾಪಸ್ ತೆರಳುವ ವೇಳೆ ಮಾರ್ಗ ಮಧ್ಯೆ ಇರುವ ಖಾಸಗಿ ಹೋಟೆಲ್‌ಗೆ ಊಟಕ್ಕಾಗಿ ತೆರಳಿದ್ದಾರೆ.

ಈ ವೇಳೆ ಹೋಟೆಲ್‌ನಲ್ಲಿದ್ದ ಪ್ರವಾಸಿಗರು ಚಿಪ್ಸ್ ತೆಗೆದುಕೊಂಡು ತಿಂದ ವಿಚಾರಕ್ಕೆ ಹೋಟೆಲ್ ಮಾಲೀಕ ಆಗ್ನೇಶ್ ಕೋಪಗೊಂಡಿದ್ದಾನೆ. ಯಾರ ಅನುಮತಿ ಪಡೆದು ಚಿಪ್ಸ್ ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿ ಗಲಾಟೆ ಮಾಡಿದ್ದಾನೆ. ಇದರಿಂದ ಬೇಸರಗೊಂಡ ಪ್ರವಾಸಿಗರು ಊಟ ಮಾಡದೆ ವಾಪಸ್ ಹೋಗುವುದಾಗಿ ಹೇಳಿದ್ದಾರೆ. ಇದರಿಂದ ಕೋಪಗೊಂಡ ಹೋಟೆಲ್ ಮಾಲೀಕ ಪ್ರವಾಸಿಗರೊಂದಿಗೆ ವಾಗ್ವಾದ ನಡೆಸಿದ್ದಾನೆ. ಅಲ್ಲದೆ, ಹೋಟೆಲ್‌ನಲ್ಲಿ ಇದ್ದ ಮಚ್ಚು ತೆಗೆದುಕೊಂಡು ಪ್ರವಾಸಿಗರನ್ನು ಬೆದರಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಬಳಿಕ ಅದೇ ಹೋಟೆಲ್ ಮಾಲೀಕ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ, ತನ್ನ ಹಾಗೂ ಪತ್ನಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ನೀಡಿದ್ದಾನೆ. ನಂತರ ಜಿಲ್ಲಾ ಆಸ್ಪತ್ರೆಗೆ ತೆರಳಿ ದಾಖಲಾಗಿದ್ದಾನೆ.

ದೂರಿನ ಆಧಾರದ ಮೇಲೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರವಾಸಿಗರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಆದರೆ, ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಪರಿಶೀಲಿಸದೇ ಪೊಲೀಸರು ಎಫ್‌ಐಆರ್ ದಾಖಲಿಸಿ ಎಡವಟ್ಟು ಮಾಡಿಕೊಂಡಿದ್ದಾರೆ. ಈ ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ