Breaking News

ದ್ವೇಷ ಭಾಷಣ ಆರೋಪ – ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್ ವಿರುದ್ಧ ಎಫ್‌ಐಆರ್

Spread the love

ಕಲಬುರಗಿ: ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ  ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್  ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪ್ರಚೋದನಕಾರಿ, ದ್ವೇಷಪೂರಿತ ಮತ್ತು ಕೋಮು ಸೌಹಾರ್ದತೆ ಕೆಡಿಸುವ ನಿಟ್ಟಿನಲ್ಲಿ ಭಾಷಣ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಅಜಗರ್, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ರೆವೂರ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇತ್ತೀಚೆಗೆ ಆಳಂದ ಲಾಡ್ಲೆ ಮಶಾಕ್ ಗಲಾಟೆ ಕೇಸ್ ವಾಪಸ್ ಪಡೆದ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಿತ್ತು. ವೇದಿಕೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ದತ್ತಾತ್ರೇಯ ಪಾಟೀಲ್ ರೇವೂರ್, ಮಾಜಿ ಸಚಿವ ದಿ.ಖಮರುಲ್ ಇಸ್ಲಾಂ ಕಲಬುರಗಿಯನ್ನು ಮಿನಿ ಪಾಕಿಸ್ತಾನ ಮಾಡಲು ಮುಂದಾಗಿದ್ದರು. ಹಾಗಾಗಿಯೆ ಚುನಾವಣೆಯಲ್ಲಿ ಖಮರುಲ್ ಇಸ್ಲಾಂ ಸೋಲನ್ನ ಅನುಭವಿಸಿದ್ದರು ಎಂದು ಹೇಳಿದ್ದರು. ಈ ಸಂಬಂಧ ಮಾಜಿ ಶಾಸಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.


Spread the love

About Laxminews 24x7

Check Also

ಮಾಜಿ ಎಂಎಲ್‌ಸಿ ಕಿಡ್ನ್ಯಾಪ್‌ ಕೇಸ್ – 3 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ನಾಲ್ವರು ಅರೆಸ್ಟ್

Spread the loveಆನೇಕಲ್: ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ  ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ