Breaking News

ನೆಹರು ದಾಖಲೆ ಮುರಿದು ಹೊಸ ಇತಿಹಾಸ ಸೃಷ್ಟಿಸಲು ಮುಂದಾದ ಮೋದಿ

Spread the love

ನವದೆಹಲಿ: ಜೂನ್ 10 ರಂದು ಪ್ರಧಾನಿ ನರೇಂದ್ರ ಮೋದಿ  ಅವರು ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಭಾರತದ ಪ್ರಧಾನಿ ಎಂಬ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ 4,398 ದಿನಗಳ ದಾಖಲೆಯನ್ನ ಮುರಿದು 4,399 ದಿನಗಳ ನಿರಂತರ ಸೇವೆಯ ಮೈಲುಗಲ್ಲು ತಲುಪಲಿದ್ದಾರೆ.

ಮೇ 26, 2014 ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಅವರು, ಜೂನ್ 10, 2026 ರಂದು 4,399 ದಿನಗಳ ನಿರಂತರ ಅಧಿಕಾರಾವಧಿಯನ್ನ ಪೂರೈಸಲಿದ್ದಾರೆ. ಇದರೊಂದಿಗೆ ಅವರು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ನೆಹರು ಅವರು 1952 ರ ಮೇ 13 ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿ, ಮೇ 27, 1964ರ ವರೆಗೆ ಒಟ್ಟು 4,398 ದಿನಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿದ್ದರು. ಈ ದಾಖಲೆಯು ಕಳೆದ 64 ವರ್ಷಗಳಿಂದಲೂ ಅಚ್ಚಳಿಯದೆ ಉಳಿದಿತ್ತು.

ಇದಕ್ಕೂ ಮುನ್ನ ಮೋದಿ ಅವರು ಜುಲೈ 25, 2025ರಂದು ಮತ್ತೊಂದು ಮೈಲುಗಲ್ಲು ದಾಟಿದ್ದರು. ಆ ದಿನ ಅವರು 4,077 ದಿನಗಳೊಂದಿಗೆ ಮೂರನೇ ಅತ್ಯಂತ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿ ಇಂದಿರಾ ಗಾಂಧಿ ಅವರ ದಾಖಲೆಯನ್ನು ಹಿಂದಿಕ್ಕಿದ್ದರು. ಇಂದಿರಾ ಗಾಂಧಿ ಅವರು ಜನವರಿ 24, 1966ರಿಂದ ಮಾರ್ಚ್ 24, 1977ರವರೆಗೆ ಸುಮಾರು 11 ವರ್ಷ 2 ತಿಂಗಳ ಕಾಲ (4,077 ದಿನ) ನಿರಂತರ ಅಧಿಕಾರ ನಡೆಸಿದ್ದರು.


Spread the love

About Laxminews 24x7

Check Also

ಮಾಜಿ ಎಂಎಲ್‌ಸಿ ಕಿಡ್ನ್ಯಾಪ್‌ ಕೇಸ್ – 3 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ನಾಲ್ವರು ಅರೆಸ್ಟ್

Spread the loveಆನೇಕಲ್: ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ  ಅವರನ್ನು ಅಪಹರಿಸಿ 3 ಕೋಟಿ ಹಣಕ್ಕೆ ಬೇಡಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ