Breaking News

ಪತಿ ಸಾವಿನಿಂದ ಖಿನ್ನತೆ – ಇಬ್ಬರು ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿ

Spread the love

ಕೋಲಾರ: ಪತಿಯ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಕತ್ತು ಹಿಸುಕಿಕೊಂದ ಘಟನೆ ಮುಳಬಾಗಿಲು ತಾಲೂಕಿನ ಆಲಂಗೂರು ಗ್ರಾಮದಲ್ಲಿ ನಡೆದಿದೆ.

ಆಂದ್ರಪ್ರದೇಶ ಮೂಲದ ಬುಜ್ಜಮ್ಮ (22) ತನ್ನಿಬ್ಬರು ಮಕ್ಕಳಾದ ಸರಸ್ವತಿ (3) ಹಾಗೂ 1 ವರ್ಷದ ಮಗು ಹೇಮಾಶ್ರೀಯನ್ನು ಹತ್ಯೆ ಮಾಡಿದ್ದಾಳೆ. ಬಳಿಕ ತಾನು ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯರು ಆಕೆಯನ್ನು ರಕ್ಷಿಸಿದ್ದಾರೆ.

ಮೂಲತಃ ಆಂಧ್ರದ ವಿನಾಯಕಪುರಂನ ಬಾಬು ಹಾಗೂ ಬುಜ್ಜಮ್ಮ ದಂಪತಿ ಒಂದು ವರ್ಷದಿಂದ ಆಲಂಗೂರಿನ ಮಾವಿನ ತೋಪಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ 20 ದಿನಗಳ ಹಿಂದೆ ಪತಿ ಬಾಬು ಅಪಘಾತದಲ್ಲಿ ಮೃತಪಟ್ಟಿದ್ದ. ಇದರಿಂದ ಮಹಿಳೆ ಮಾನಸಿಕ ಖಿನ್ನತೆಗೆ ಜಾರಿದ್ದಳು. ಇದರಿಂದ ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆಗೆ ನಿರ್ಧರಿಸಿದ್ದಳು. ಈ ಸಂಬಂಧ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ