Breaking News

ಮಂತ್ರಾಲಯ ರಾಯರ ಹುಂಡಿಗೆ 22 ದಿನದಲ್ಲಿ 4.35 ಕೋಟಿ ಕಾಣಿಕೆ

Spread the love

ರಾಯಚೂರು: ಕಲಿಯುಗ ಕಾಮಧೇನು ಮಂತ್ರಾಲಯದ  ಶ್ರೀ ರಾಘವೇಂದ್ರ ಸ್ವಾಮಿ ಮಠದ 22 ದಿನದ ಕಾಣಿಕೆ ಹುಂಡಿ ಎಣಿಕೆ ಮುಕ್ತಾಯವಾಗಿದ್ದು, 4.35 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಶಾಲಾ-ಕಾಲೇಜುಗಳಿಗೆ ರಜೆಯಿದ್ದ ಹಿನ್ನೆಲೆ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಭಕ್ತರು ದಂಡು ಹರಿದು ಬಂದಿದ್ದು, 22 ದಿನಗಳಲ್ಲೇ ಕೋಟ್ಯಂತರ ರೂ. ಕಾಣಿಕೆ ಸಂಗ್ರಹವಾಗಿದೆ. ಒಟ್ಟು 4,25,25,136 ರೂ. ಕಾಣಿಕೆ ಸಂಗ್ರಹವಾಗಿದ್ದು, ಇದರಲ್ಲಿ 4,19,97,861 ರೂ. ಕರೆನ್ಸಿ ನೋಟುಗಳು ಹಾಗೂ 15,27,275 ರೂ. ನಾಣ್ಯಗಳು ಸಂಗ್ರಹವಾಗಿವೆ. ಜೊತೆಗೆ 46 ಗ್ರಾಂ ಚಿನ್ನ, 750 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ.

ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ  ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು. ಕರ್ನೂಲು ಜಿಲ್ಲೆಯ ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತ ಸುಧಾಕರ ರೆಡ್ಡಿ, ಶ್ರೀಮಠದ ಅಧಿಕಾರಿಗಳು ಹುಂಡಿ ಎಣಿಕೆ ವೇಳೆ ಹಾಜರಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ