Breaking News

ತುಮಕೂರು: ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

Spread the love

ತುಮಕೂರು: ವಿದೇಶಿ ಭಯೋತ್ಪಾದಕ ಸಂಘಟನೆ, ಭಯೋತ್ಪಾದಕನ ಜೊತೆ ನಿರಂತರ ಸಂಪರ್ಕದಲ್ಲಿದ್ದ ಹಾಗೂ ದೇಶದ ಭದ್ರತೆಗೆ ಧಕ್ಕೆ ತರುವಂಥ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದ ಮೇಲೆ ತುಮಕೂರಿನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳು ನೀಡಿದ ರಹಸ್ಯ ಹಾಗೂ ನಿಖರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ತುಮಕೂರು ನಗರ ಪೊಲೀಸರು ಶಂಕಿತ ಉಗ್ರನನ್ನು ಬಂಧಿಸಿದ್ದಾರೆ. ಬಂಧಿತ ಯುವಕ ದೇಶದ ಆಂತರಿಕ ಬೆಳವಣಿಗೆಗಳ ಕುರಿತು ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದ ಎನ್ನಲಾಗಿದೆ.

ಬಂಧಿತ ಆರೋಪಿಯನ್ನು ತುಮಕೂರಿನ ಶ್ರೀರಾಮನಗರ ನಿವಾಸಿ ಅಲ್ಲಾಬಕ್ಷು (24) ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲವು ಸಮಯದಿಂದ ಸಾಮಾಜಿಕ ಜಾಲತಾಣವಾದ ಎಕ್ಸ್ (X) ಖಾತೆಯ ಮೂಲಕ ವಿದೇಶಿ ಮೂಲದ ಶಂಕಿತ ಉಗ್ರ ಸಂಘಟನೆಯ ವ್ಯಕ್ತಿಯೊಬ್ಬನ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದ ಎಂಬ ಆಘಾತಕಾರಿ ಮಾಹಿತಿ ತಿಳಿದುಬಂದಿದೆ. ದೇಶದ ಆಂತರಿಕ ಭದ್ರತೆ ಮತ್ತು ಶಾಂತಿ ಕದಡುವ ನಿಟ್ಟಿನಲ್ಲಿ ಈತ ಸರಣಿ ಪ್ರಚೋದನಾತ್ಮಕ ಸಂದೇಶಗಳನ್ನು ರವಾನಿಸುತ್ತಿದ್ದ ಹಾಗೂ ದೇಶ ವಿರೋಧಿ ಚಟುವಟಿಕೆಗಳ ಕುರಿತು ಚಾಟ್ ನಡೆಸುತ್ತಿದ್ದ ಎಂಬ ಆರೋಪವಿದೆ.

ಅಲ್ಲಾಬಕ್ಷು ಸಾಮಾಜಿಕ ಜಾಲತಾಣಗಳಲ್ಲಿ ನಡೆಸುತ್ತಿದ್ದ ಅನುಮಾನಾಸ್ಪದ ಚಟುವಟಿಕೆಗಳು ಹಾಗೂ ದೇಶ ವಿರೋಧಿ ಚಾಟಿಂಗ್‌ಗಳ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಗಳು ತೀವ್ರ ನಿಗಾವಹಿಸಿದ್ದವು. ಆತನ ಲಿಂಕ್‌ಗಳನ್ನು ಪತ್ತೆಹಚ್ಚಿದ ಬಳಿಕ, ತನಿಖಾ ಸಂಸ್ಥೆಗಳು ರಾಜ್ಯ ಪೊಲೀಸರಿಗೆ ಮಾಹಿತಿ ರವಾನಿಸಿದ್ದವು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ತುಮಕೂರು ನಗರ ಪೊಲೀಸರು ಗುರುವಾರ ರಾತ್ರಿ ಕ್ಯಾತಸಂದ್ರದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಪ್ರಸ್ತುತ ಈ ಬಂಧಿತ ಯುವಕನಿಗೆ ಕೃತ್ಯದಲ್ಲಿ ಸಾಥ್ ನೀಡಿದ ಹಾಗೂ ಆತನ ಜೊತೆ ನಿಕಟ ಸಂಪರ್ಕದಲ್ಲಿದ್ದ ಮತ್ತೊಬ್ಬ ವ್ಯಕ್ತಿಯ ಬಗ್ಗೆಯೂ ಮಾಹಿತಿ ಲಭ್ಯವಾಗಿದ್ದು, ಆತನಿಗಾಗಿ ತುಮಕೂರು ನಗರ ಪೊಲೀಸರು ಬಲೆ ಬೀಸಿದ್ದಾರೆ. ಈ ಕುರಿತು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.


Spread the love

About Laxminews 24x7

Check Also

ಇಂದಿರಾ ಕ್ಯಾಂಟೀನ್‌ನಲ್ಲಿ ಕೊಳೆತ ತರಕಾರಿ ಬಳಕೆ

Spread the loveಮುಗಳಖೋಡ: ಪುರಸಭೆ ಎದುರು ಇರುವ ಇಂದಿರಾ ಕ್ಯಾಂಟಿನ್ ಆಹಾರ ತಯಾರಿಕೆ ಘಟಕದಲ್ಲಿ ಕೊಳೆತ ತರಕಾರಿ ಬಳಕೆ ಮಾಡುತ್ತಿರುವುದನ್ನು ಖಂಡಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ