Breaking News

ಯಾವ್ ಟ್ರಬಲ್ ಶೂಟರ್ ರೀ – ಸಿಎಂ ಡಿಕೆಶಿಗೆ ಕೆ.ಎನ್‌ ರಾಜಣ್ಣ ಕೌಂಟರ್‌

Spread the love

ತುಮಕೂರು: ಯಾವ್ ಟ್ರಬಲ್ ಶೂಟರ್ ರೀ… ನೀವೇ ಟ್ರಬಲ್ ಶೂಟರ್ ಮಾಡಿರೋದು. ಹಾಗಿದ್ದ ಮೇಲೆ ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದರು. ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡುವ ವಿಚಾರ ಹಾಗೂ ಖಾತೆ ಹಂಚಿಕೆ ಕುರಿತು ಕೆ.ಎನ್. ರಾಜಣ್ಣ ಅವರು ಪ್ರತಿಕ್ರಿಯಿಸಿದರು.

ಮಧುಗಿರಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಮಲಿಂಗಾ ರೆಡ್ಡಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಹೌದಾ.. ಹೊಸ ಸುದ್ದಿ ಹೇಳ್ತಿರಾ ಅಂದಕೊಂಡರೆ ಹಳೆ ಸುದ್ದಿ ಹೇಳ್ತಿರಲ್ಲ. ಇದು ಯಾವುದೇ ಪತನ ಅಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ. ರಾಮಲಿಂಗಾ ರೆಡ್ಡಿಯವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಹಾಗೂ ಶಾಸಕರಾಗಿ ತಮ್ಮ ಜವಾಬ್ದಾರಿಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ ಎಂದು ಕೆ ಎನ್‌ ರಾಜಣ್ಣ ಸ್ಪಷ್ಟಪಡಿಸಿದರು.

ಇದೇ ವೇಳೆ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವನ್ನೂ ಪ್ರಸ್ತಾಪಿಸಿದ ರಾಜಣ್ಣ, ಈಶ್ವರ ಖಂಡ್ರೆ ಅವರಿಗೆ ಅದೇ ಖಾತೆ ಯಾಕೆ ಕೊಡಲಿಲ್ಲ? ಪರಮೇಶ್ವರ್ ಅವರಿಗೆ ಗೃಹ ಖಾತೆ ನೀಡಬೇಕಿತ್ತು. ಯಾಕೆ ಕಂದಾಯ ಖಾತೆ ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದರು.

ಯಾರ ಆಸ್ತಿ ಯಾರಪ್ಪನ ಸ್ವತ್ತು ಅಲ್ಲ, ಬದಲಾದ ಸನ್ನಿವೇಶಕ್ಕೆ ಅನುಗುಣವಾಗಿ ಅವಕಾಶಗಳು ಸಿಗುತ್ತವೆ. ಅಂತಹ ಅವಕಾಶಗಳನ್ನು ಬಳಸಿಕೊಂಡು ಜನಪರ ಕೆಲಸ ಮಾಡಬೇಕು ಎಂದು ಹೇಳಿದರು.

ಇನ್ನು ಸಚಿವ ಸಂಪುಟ ಪುನರ್‌ರಚನೆಯ ಬಳಿಕ ಖಾತೆ ಹಂಚಿಕೆ ಕಾಂಗ್ರೆಸ್‌ನಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೇ ವೇಳೆ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಬೆಂಗಳೂರು ಅಭಿವೃದ್ಧಿ ಖಾತೆಯ ಕೇಳಿದ್ದರು. ಆದರೆ ಖಾತೆ ಸಿಗದ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯ ನಡುವೆ ರಾಮಲಿಂಗಾ ರೆಡ್ಡಿ ಅವರನ್ನು ಮನವೊಲಿಸಿ ರಾಜೀನಾಮೆ ಹಿಂಪಡೆಯುವಂತೆ ಕಾಂಗ್ರೆಸ್ ಹೈಕಮಾಂಡ್ ಯಾವ ಕ್ರಮ ಕೈಗೊಳ್ಳಲಿದೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ.


Spread the love

About Laxminews 24x7

Check Also

ರಾಮಲಿಂಗಾರೆಡ್ಡಿ ನನ್ನ ಆಪ್ತ ಸ್ನೇಹಿತರು, ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ: ಡಿಕೆಶಿ

Spread the loveಬೆಂಗಳೂರು: ರಾಮಲಿಂಗಾರೆಡ್ಡಿಯವರುನಮ್ಮ ಪಕ್ಷದ ಹಿರಿಯ ನಾಯಕರು. ನನ್ನ ಆಪ್ತ ಸ್ನೇಹಿತರು. ಅವರ ಅಸಮಾಧಾನವನ್ನು ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ