Breaking News

ರಾಮಲಿಂಗಾರೆಡ್ಡಿ ನನ್ನ ಆಪ್ತ ಸ್ನೇಹಿತರು, ಮಾತಾಡಿ ಸಮಸ್ಯೆ ಬಗೆಹರಿಸಿಕೊಳ್ಳುತ್ತೇವೆ: ಡಿಕೆಶಿ

Spread the love

ಬೆಂಗಳೂರು: ರಾಮಲಿಂಗಾರೆಡ್ಡಿಯವರುನಮ್ಮ ಪಕ್ಷದ ಹಿರಿಯ ನಾಯಕರು. ನನ್ನ ಆಪ್ತ ಸ್ನೇಹಿತರು. ಅವರ ಅಸಮಾಧಾನವನ್ನು ಮಾತಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ರಾಮಲಿಂಗಾರೆಡ್ಡಿಯವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವಾಗಿ, ಅವರು ನನ್ನ ಸಹೋದ್ಯೋಗಿ. ಪಕ್ಷದ ಹಿರಿಯ ನಾಯಕರು. ಅವರಿಗೆ ಹಳ್ಳಿಗಳಲ್ಲಿ ಕೆಲಸ ಮಾಡಲು ಆಗಲ್ಲ ಎಂದಿದ್ದಾರೆ. ಬೇರೆ ಖಾತೆ ನೀಡಬೇಕಂಬ ಆಪೇಕ್ಷೆ ಅವರಿಗಿದೆ. ಈ ಬಗ್ಗೆ ಅವರ ಜೊತೆ ಚರ್ಚಿಸುತ್ತೇನೆ. ಕ್ಯಾಬಿನೆಟ್‌ನಲ್ಲಿ ಚರ್ಚಿಸಿ ಈ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.

ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ತಮಗೆ ಇಷ್ಟವಿಲ್ಲದ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಮುಂದುಗಡೆ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.

ಯಾರ ಮನವೊಲಿಕೆಗೂ ಬಗ್ಗದ ರೆಡ್ಡಿ, “ನನ್ನ ನಿರ್ಧಾರ ಅಚಲ, ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ” ಎಂದು ಹಠ ಹಿಡಿದಿರುವುದು ಡಿಕೆಶಿ ಪಾಲಿಗೆ ಆರಂಭದಲ್ಲೇ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ.


Spread the love

About Laxminews 24x7

Check Also

ಅಸಮಾಧಾನಗೊಂಡಿದ್ದೇನೆ, ಕೊಟ್ಟ ಮಾತು ತಪ್ಪಿದ್ದಕ್ಕೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ – ಡಿಕೆಶಿಗೆ ರಾಮಲಿಂಗಾರೆಡ್ಡಿ ಶಾಕ್‌

Spread the loveಬೆಂಗಳೂರು: ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ತಮಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ