Breaking News

ಕನಕಪುರದ ಕಂಚನಹಳ್ಳಿ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ – ನಿಟ್ಟುಸಿರು ಬಿಟ್ಟ ಜನ

Spread the love

ರಾಮನಗರ: ಹಲವು ದಿನಗಳಿಂದ ಗ್ರಾಮಸ್ಥರಿಗೆ ಉಪಟಳ ನೀಡ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ  ಹಿಡಿದಿರುವ ಘಟನೆ ಕನಕಪುರ ತಾಲೂಕಿನ ಕಂಚನಹಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ  ಬಿದ್ದಿದ್ದು, ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಕಳೆದ ಹಲವು ದಿನಗಳಿಂದ ಗ್ರಾಮದ ಜನರ ನಿದ್ದೆಗೆಡಿಸಿದ್ದ ಈ ಚಿರತೆ ಸುತ್ತಮುತ್ತಲಿನ ಜನ ಸಾಕಿದ್ದ ಕೋಳಿ, ನಾಯಿ ಸೇರಿ ಜಾನುವಾರುಗಳ ಮೇಲೆ ದಾಳಿ ಮಾಡಿತ್ತು. ಚಿರತೆ ಕಾಟದಿಂದ ಜನ ತಮ್ಮ ಜಮೀನಿಗೆ ಹೋಗೋದಕ್ಕೂ ಹೆದರುತ್ತಿದ್ದರು. ಚಿರತೆ ಹಾವಳಿ ತಡೆಯುವಂತೆ ಅರಣ್ಯ ಇಲಾಖೆ ಮನವಿ ಮಾಡಿದ್ರು.

ಅರಣ್ಯ ಇಲಾಖೆ ಸಿಬ್ಬಂದಿ ಕೂಡ ಚಿರತೆ ಸೆರೆಗೆ ಹರಸಾಹಸ ನಡೆಸಿತ್ತು. ಗ್ರಾಮದ ಸುತ್ತ ವಿವಿಧೆಡೆ ಬೋನುಗಳನ್ನ ಇರಿಸಲಾಗಿತ್ತು. ಸದ್ಯ ಚಿರತೆ ಸೆರೆಯಾಗಿದ್ದು, ಗ್ರಾಮದ ಜನ ನಿಟ್ಟುಸಿರುಬಿಟ್ಟಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗೂ ಧನ್ಯವಾದ ಹೇಳಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ