Breaking News

ಚಿಕ್ಕಬಳ್ಳಾಪುರ | KIADB ಯಿಂದ 13 ಹಳ್ಳಿಗಳ 2,800 ಎಕ್ರೆ ಭೂಸ್ವಾಧೀನ ವಿರೋಧಿಸಿ ಬೈಕ್ ರ‍್ಯಾಲಿ

Spread the love

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2,800 ಎಕರೆ ಜಮೀನನ್ನ ಕೆಐಎಡಿಬಿ ಭೂಸ್ವಾಧೀನ ಮಾಡಿಕೊಳ್ಳಬಾರದು ಎಂದು ರೈತರು ಚಿಕ್ಕಬಳ್ಳಾಪುರದಿಂದ  ಬೆಂಗಳೂರಿನ ವಿಧಾನಸೌಧಕ್ಕೆ ಬೈಕ್ ರ‍್ಯಾಲಿ  ನಡೆಸಿದರು.

ಕಳೆದ 81 ದಿನಗಳಿಂದ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ರೈತರು  ಇಂದು ಬೆಂಗಳೂರಿಗೆ ಬೈಕ್ ರಾಲಿ ನಡೆಸಿದ್ದರು. ಸಾವಿರಾರು ಮಂದಿ ರೈತರು ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡರು. ಈ ಹಿನ್ನೆಲೆ ಚಿಕ್ಕಬಳ್ಳಾಪುರ ಪೊಲೀಸರು 500 ಕ್ಕೂ ಹೆಚ್ಚು ಮಂದಿ ಬಂದೋಬಸ್ತ್‌ ನಿಯೋಜಿಸಿದ್ದರು.

ವಿಧಾನಸೌಧಕ್ಕೆ ಹೊರಟಿದ್ದ ಬೈಕ್ ರ‍್ಯಾಲಿಯನ್ನ ಅಣಕನೂರು ಬಳಿಯೇ ಪೊಲೀಸರು ತಡೆದರು. ಇದರಿಂದ ಸತತ ಮೂರು ಗಂಟೆಗಳ ಕಾಲ ರಸ್ತೆಯಲ್ಲೇ ಕೂತು ರೈತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಜಿ ಪ್ರಭು ಆಗಮಿಸಿ ರೈತರ ಮನವೊಲಿಸುವಲ್ಲಿ ಯಶಸ್ವಿಯಾದರು.

ಕೊನೆಗೆ ಜಿಲ್ಲಾಧಿಕಾರಿಗಳು ಇನ್ನೆರಡು ವಾರಗಳ ಒಳಗೆ ಕೆಐಎಡಿಬಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಬಳಿಕವೇ ಪ್ರತಿಭಟನೆ ವಾಪಸ್‌ ಪಡೆದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ