Breaking News

ಸಂಕೇಶ್ವರದ ಶ್ರೀ ಶಂಕರಲಿಂಗ ಸಹಕಾರಿ ಸಂಘದಲ್ಲಿ ಮುಂಗಾರು ಬಿತ್ತನೆ ಬೀಜ ವಿತರಣೆಗೆ ಶಾಸಕ ನಿಖಿಲ ಕತ್ತಿ ಚಾಲನೆ

Spread the love

ಹುಕ್ಕೇರಿ:ಸಂಕೇಶ್ವರ ಮುಂಗಾರು ಹಂಗಾಮು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಸಕಾಲದಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ದೊರೆಯುವಂತಾಗಬೇಕು ಎಂದು ಹುಕ್ಕೇರಿ ಮತಕ್ಷೇತ್ರದ ಶಾಸಕರಾದ ನಿಖಿಲ ಕತ್ತಿ ಹೇಳಿದರು.

ತಾಲೂಕಿನ ಸಂಕೇಶ್ವರ ಪಟ್ಟಣದ ಶ್ರೀ ಶಂಕರಲಿಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮುಂಗಾರು ಹಂಗಾಮಿನ ಬಿತ್ತನೆ ಬೀಜ ವಿತರಣೆ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ರೈತರು ಕೃಷಿ ಇಲಾಖೆ ಹಾಗೂ ಸಹಕಾರಿ ಸಂಘಗಳ ಮೂಲಕ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಇಳುವರಿ ಪಡೆಯಬೇಕು ಎಂದು ಅವರು ಈ ಸಂದರ್ಭದಲ್ಲಿ ಕರೆ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಶಂಕರಲಿಂಗ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಪ್ರಮುಖ ರೈತ ಮುಖಂಡರು ಹಾಗೂ ಭಾಗದ ನೂರಾರು ರೈತ ಬಾಂಧವರು ಉಪಸ್ಥಿತರಿದ್ದರು. ಸಹಕಾರಿ ಸಂಘದ ವತಿಯಿಂದ ರೈತರಿಗೆ ವ್ಯವಸ್ಥಿತವಾಗಿ ಬೀಜ ವಿತರಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದ್ದಾರೆ.


Spread the love

About Laxminews 24x7

Check Also

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಧನ್ಯವಾದ ಹೇಳಿದ ನೂತನ ಸಿಎಂ ಡಿ.ಕೆ.ಶಿವಕುಮಾರ್

Spread the loveಸಿಎಂ ಡಿ ಕೆ ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ