Breaking News

ಮನೆಗೆ ನುಗ್ಗಿ ಚಿನ್ನಾಭರಣ ಕದ್ದಿದ್ದ ಆರೋಪಿ ಅರೆಸ್ಟ್: ಚಿನ್ನಾಭರಣ ವಶಕ್ಕೆ

Spread the love

ಬೆಳಗಾವಿ: ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಭೋವಿ ಗಲ್ಲಿಯ ನಿವಾಸಿ ನಿಲೇಶ ಸುತಾರ ಬಂಧಿತ ಆರೋಪಿ. 2026ರ ಜ. 1ರಂದು ಮಂಡೋಳಿ ರಸ್ತೆಯ ಭವಾನಿ ನಗರದ ತಮ್ಮ ಮನೆಯಿಂದ ಚಿನ್ನಾಭರಣ ಕಳ್ಳತನವಾಗಿವೆ ಎಂದು ರೋಹನ್ ಜಾಧವ ಎಂಬುವರು ಗ್ರಾಮೀಣ ಠಾಣೆಗೆ ದೂರು ನೀಡಿದ್ದರು.

ಈ ಕುರಿತು ತನಿಖೆ ಕೈಗೊಂಡಿದ್ದ ಪೊಲೀಸರು, ಸಂಶಯ ವ್ಯಕ್ತಪಡಿಸಿ ನಿಲೇಶ ಸುತಾರ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ರೋಹನ್ ಜಾಧವ ಮತ್ತು ಮಚ್ಛೆಯ ಲಕ್ಷ್ಮೀ ದೇವಲಾಪುರ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. 7 ಲಕ್ಷ ರೂ. ಮೌಲ್ಯದ 45 ಗ್ರಾಂ ಬಂಗಾರದ ಆಭರಣ ಹಾಗೂ 10.90 ಲಕ್ಷ ರೂ. ಮೌಲ್ಯದ 4 ಕೆಜಿ 179 ಗ್ರಾಂ ಬೆಳ್ಳಿ ಸಾಮಗ್ರಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಆರೋಪಿಗಳು ಶಾಮೀಲಿದ್ದು, ಅವರ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ