Breaking News

ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು

Spread the love

ಬೆಳಗಾವಿ: ಈಜಲು  ಹೋಗಿದ್ದ ಬಾಲಕ  ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೆಳಗಾವಿ  ಜಿಲ್ಲೆಯ ಬೈಲಹೊಂಗಲ ತಾಲೂಕಿನ ವಕ್ಕುಂದ ಹೊರವಲಯದ ಮಲಪ್ರಭಾ ನದಿಯಲ್ಲಿ  ನಡೆದಿದೆ.

ಈಜಲು ತೆರಳಿದ್ದ 15 ವರ್ಷದ ಮಹೇಶ್ ಗಣಾಚಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಬಾಲಕನ ಮೃತದೇಹ ನೀರಿನಿಂದ ಹೊರತೆಗೆದು ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಘಟನಾ ಸ್ಥಳಕ್ಕೆ ಬೈಲಹೊಂಗಲ ಸಿಪಿಐ ಪ್ರಮೋದ ಯಲಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆ

Spread the loveಬೆಂಗಳೂರು: ಕುಡಿಯುವ ನೀರಿಗಾಗಿ 224 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ