Breaking News

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ 3 ವರ್ಷ ಜೈಲು ಶಿಕ್ಷೆ,15 ಸಾವಿರ ದಂಡ

Spread the love

ದಾವಣಗೆರೆ: ಮದುವೆಯಾಗುವುದಾಗಿ  ನಂಬಿಸಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ದಾವಣಗೆರೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯವು  3 ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ವಿರೂಪಾಕ್ಷಿ ಶಿಕ್ಷೆಗೆ ಗುರಿಯಾದ ಅಪರಾಧಿ. 2023ರ ಅಕ್ಟೋಬರ್ 4ರಂದು, ವಿರೂಪಾಕ್ಷಿ ತನ್ನ 14 ವರ್ಷದ ಅಪ್ರಾಪ್ತ ಮಗಳನ್ನು ಬಲವಂತವಾಗಿ ಕರೆದುಕೊಂಡು ಹೋಗಿದ್ದಾನೆ, ಪತ್ತೆ ಮಾಡಿಕೊಡುವಂತೆ ಬಾಲಕಿ ತಂದೆ ಬಿಳಿಚೋಡು ಠಾಣೆಗೆ ದೂರು ನೀಡಿದ್ದರು.

ಬಳಿಕ ಠಾಣೆ ಪೊಲೀಸ್‌ ನಿರೀಕ್ಷಕ ಸೋಮಶೇಖರ್ ಕೆಂಚರೆಡ್ಡಿ ನಡೆಸಿದ ತನಿಖೆಯಿಂದ ಅಪರಾಧಿ ಅಪ್ರಾಪ್ತೆಯನ್ನ ಪುಸಲಾಯಿಸಿ ಬಳ್ಳಾರಿ ಜಿಲ್ಲೆಯ ಕುಡಿತಿನಿಗೆ ಕರೆದೊಯ್ದು ಪರೀಕ್ಷೆ ಬರೆಯಲು ಬಂದಿರುವುದಾಗಿ ಸುಳ್ಳು ಹೇಳಿ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡು ಅಪ್ರಾಪ್ತಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ತನಿಖೆಯಿಂದ ಬೆಳಕಿಗೆ ಬಂದಿತ್ತು.

ಈ ಬಗ್ಗೆ ಪಿಐ ಸೋಮಶೇಖ‌ರ್ ಕೆಂಚರೆಡ್ಡಿ, ಆರೋಪಿ ವಿರುದ್ಧ ನ್ಯಾಯಾಲಯದಕ್ಕೆ ದೋಷರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣ ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷ್ಸ್‌ ಎಫ್‌ಟಿಎಸ್‌ಸಿ: ನ್ಯಾಯಾಲದ ನ್ಯಾಯಾಧಿಶರಾದ ಶ್ರೀರಾಮ ನಾರಾಯಣ ಹೆಗಡೆ, ಆರೋಪ ಸಾಬೀತಾದ ಹಿನ್ನೆಲೆ ಆರೋಪಿ ವಿರೂಪಾಕ್ಷಿಗೆ 3 ವರ್ಷ ಕಾರಾಗೃಹ ಶಿಕ್ಷೆ, 15 ಸಾವಿರ ರೂ. ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ದಂಡದ ಮೊತ್ತವನ್ನು ಸಂತ್ರಸ್ತೆಗೆ ನೀಡುವಂತೆ ತೀರ್ಪು ನೀಡಿದ್ದಾರೆ. ದೂರುದಾರರ ಪರ ಸರ್ಕಾರಿ ವಕೀಲ ಬಸವರಾಜ್ ವಾದ ಮಂಡಿಸಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ