Breaking News

ಸ್ನೇಹಿತರೊಟ್ಟಿಗೆ ಪಾರ್ಟಿಗೆ ಹೋಗಿದ್ದ ಮಹಿಳೆ ಅನುಮಾನಾಸ್ಪದ ಸಾವು – ಹಳ್ಳದಲ್ಲಿ ಮೃತದೇಹ ಪತ್ತೆ

Spread the love

ಬಳ್ಳಾರಿ: ಸ್ನೇಹಿತರು & ಸಹೋದ್ಯೋಗಿಗಳ ಜೊತೆ ಪಾರ್ಟಿಗೆ  ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಬಳ್ಳಾರಿಯ  ಹಂದ್ರಾಳ್‌ ಹಳ್ಳದಲ್ಲಿ ಮೃತದೇಹ ಪತ್ತೆಯಾಗಿದೆ.

ಮೃತ ಮಹಿಳೆಯನ್ನು ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಅನಿಷಾ ಫಾತೀಮಾ (38) ಎಂದು ಗುರುತಿಸಲಾಗಿದೆ. ಈಕೆ ಪ್ರಗತಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದರು.

ಶನಿವಾರ (ಜೂ.6) ರಾತ್ರಿ ಬ್ಯಾಂಕ್ ಸಿಬ್ಬಂದಿಯೊಂದಿಗೆ ಪಾರ್ಟಿಗೆ ಹೋಗಿದ್ದರು. ಬಳಿಕ ರಾತ್ರಿ 11 ಗಂಟೆಗೆ ತಮ್ಮ ಪತಿಗೆ ಕರೆ ಮಾಡಿದ್ದಾರೆ. ನಂತರ ಅನಿಷಾ ಫಾತೀಮಾ ಸಂಪರ್ಕಕ್ಕೆ ಸಿಕ್ಕಿಲ್ಲ. ಬೆಳಗ್ಗೆ ಹಳ್ಳದ ಪಕ್ಕದ ಜಾಲಿ ಬೇಲಿಯಲ್ಲಿ ಬೆತ್ತೆಲೆ ಸ್ಥಿತಿಯಲ್ಲಿ ಮಹಿಳೆಯ ಪತ್ತೆಯಾಗಿದ್ದು, ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಎಪಿಎಂಸಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಶನಿವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಅಂದ್ರಾಳ ಹಳ್ಳ ತುಂಬಿ ಹರಿಯುತ್ತಿತ್ತು. ಹೀಗಾಗಿ ನೀರಿನ ರಭಸಕ್ಕೆ ಸ್ಕೂಟಿ ಸಮೇತ ಮಹಿಳೆ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಕೂಟಿ ಒಂದು ಕಡೆ ಮತ್ತು ಮೃತದೇಹ ಮತ್ತೊಂದು ಕಡೆ ಪತ್ತೆಯಾಗಿದೆ. ನಮ್ಮ ಮನೆ ಹೆಣ್ಣು ಮಗಳಿಗೆ ಆದ ತೊಂದರೆ ಇನ್ನೊಬ್ಬರಿಗೆ ಆಗಬಾರದು. ಘಟನೆಯ ಬಗ್ಗೆ ತನಿಖೆ ಮಾಡಬೇಕೆಂದು ಮೃತ ಮಹಿಳೆಯ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆ

Spread the loveಬೆಂಗಳೂರು: ಕುಡಿಯುವ ನೀರಿಗಾಗಿ 224 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ