ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆಯಾಗಿದ್ದು, ಪತಿ ಕುಟುಂಬಸ್ಥರ ವಿರುದ್ಧವೇ ಕೊಲೆ ಆರೋಪ ಮಾಡಿರುವ ಘಟನೆ ಮೈಸೂರಿನ ಸರಸ್ವತಿಪುರಂನಲ್ಲಿ ನಡೆದಿದೆ.
ಸಂಧ್ಯಾ (30) ಮೃತ ದುರ್ದೈವಿ. ಈಕೆ ಹುಣಸೂರು ಪುರಸಭೆ ಮಾಜಿ ಅಧ್ಯಕ್ಷೆ ಗೀತಾ ನಿಂಗರಾಜು ಅವರ ಪುತ್ರಿ. ಮೈಸೂರು ನಗರದ ಸರಸ್ವತಿ ಪುರಂ ಜವರೇಗೌಡ ಪಾರ್ಕ್ ಸಮೀಪದಲ್ಲಿ ವಾಸವಿದ್ದರು.
ಸಂಧ್ಯಾ ಅವರನ್ನ ಟಿ.ಕೆ ಬಡಾವಣೆ ನಿವಾಸಿ ಮಹದೇವ್ ಅವರ ಪುತ್ರ ಅಕ್ಷಯ್‌ಗೆ ಕೊಟ್ಟು ಮದುವೆ ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಪತಿ-ಪತ್ನಿ ಇಬ್ಬರ ಮಧ್ಯೆ ಗಲಾಟೆ ನಡೆಯುತ್ತಿತ್ತು.
ಸದ್ಯ ಏಕಾಏಕಿ ನೇಣು ಬಿಗಿದ ಸ್ಥಿತಿಯಲ್ಲಿ ಮಗಳ ಶವ ಪತ್ತೆಯಾಗಿರುವುದು ಪೋಷಕರಲ್ಲಿ ಆಘಾತ ತರಿಸಿದೆ. ಪೋಷಕರು ಪತಿ ಕುಟುಂಬದ ವಿರುದ್ಧವೇ ಕೊಲೆ ಆರೋಪ ಮಾಡಿದ್ದು, ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7