Breaking News

ಈಜಲು ಹಳ್ಳಕ್ಕೆ ಇಳಿದ ಸಹೋದರರಿಬ್ಬರು ನೀರುಪಾಲು – ಪೋಷಕರ ಆಕ್ರಂದನ

Spread the love

‎ಬೆಳಗಾವಿ: ಈಜಲು  ಹಳ್ಳಕ್ಕೆ ಇಳಿದಿದ್ದ ಅಣ್ಣ- ತಮ್ಮ ಇಬ್ಬರೂ ನೀರುಪಾಲಾದ ಘಟನೆ ಮೂಡಲಗಿ  ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ

‎ಗ್ರಾಮದ ಸಾಗರ್ ಮಾದರ (15), ಪ್ರವೀಣ್ ಮಾದರ (13) ಮೃತ ಸಹೋದರರು. ಇಬ್ಬರು ಹಳ್ಳದಲ್ಲಿ ಈಜಲು ತೆರಳಿದ್ದರು. ಈ ವೇಳೆ ನೀರಿಗಿಳಿದಾಗ ಪ್ರವೀಣ್ ಮುಳುಗಿದ್ದಾನೆ. ಇದನ್ನು ಗಮನಿಸಿ ಆತನ ರಕ್ಷಣೆಗೆ ಸಾಗರ್ ತೆರಳಿದ್ದು, ಆತನೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. 

‎ಮೃತದೇಹವನ್ನು ಸ್ಥಳೀಯರು ಹಾಗೂ ಪೊಲೀಸರು ನೀರಿನಿಂದ ಹೊರತೆಗೆದಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ