Breaking News

ಕರ್ನಾಟಕದಲ್ಲಿ ಮುಂಗಾರು ಆರ್ಭಟ – 6 ದಿನ ಹಲವೆಡೆ ರೆಡ್ ಅಲರ್ಟ್

Spread the love

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.

‎ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಅತಿಯಾದ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದಿನಿಂದ ಜೂನ್ 13ರವರೆಗೆ ಮಹಾ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿರುಗಾಳಿ ಸಮೇತ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. 

‎ಇನ್ನು ಉಡುಪಿ ಜಿಲ್ಲೆಗೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಎರಡು ದಿನಗಳ ಕಾಲ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕಡಲ ಕಡೆಗೆ ಹೋಗಬೇಡಿ ಎಂದು ಎಚ್ಚರಿಕೆ ನೀಡಲಾಗಿದೆ. ನದಿ ಪಾತ್ರದ ಪ್ರದೇಶಗಳಲ್ಲಿ ಕಣ್ಗಾಗವಲಿರಿಸಿದ್ದು, ಈ ಮಳೆಗಾಲದ ಮೊದಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೆರೆ ಉಂಟಾಗುವ ಸಾಧ್ಯತೆಯಿದೆ. ಸದ್ಯಕ್ಕೆ ಜಿಲ್ಲೆಯಾದ್ಯಂತ ತುಂತುರು ಮಳೆಯಾಗುತ್ತಿದೆ. 


Spread the love

About Laxminews 24x7

Check Also

ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಆಗಲ್ಲ: ಬೇಳೂರು ಗೋಪಾಲಕೃಷ್ಣ

Spread the loveಬೆಂಗಳೂರು: ಸಿದ್ದರಾಮಯ್ಯ  ಅವರು ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತ ಹೇಳಿದ್ದಾರೆ. ಆದರೆ ರಾಜಕೀಯ ನಿವೃತ್ತಿ ಆಗಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ