Breaking News

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ರೌಡಿಶೀಟರ್‌ ಕಾಲಿಗೆ ಗುಂಡೇಟು

Spread the love

ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್‌ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

ಜೀವ (19) ಗುಂಡೇಟು ತಿಂದ ಆರೋಪಿ. ಸಿಂಗೇನಾ ಅಗ್ರಹಾರದ ತೋಪಿನಲ್ಲಿ ಹೆಬ್ಬಗೋಡಿ ಪೊಲೀಸರು ಫೈರಿಂಗ್‌ ಮಾಡಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.

ಹೆಬ್ಬಗೋಡಿಯ ತಿರುಪಾಳ್ಯದಲ್ಲಿ ರೌಡಿಶೀಟರ್‌ ಜೀವ ವಾಸವಾಗಿದ್ದಾನೆ. ಕೊಲೆ, ಸುಲಿಗೆ, ದರೋಡೆ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದಾನೆ. ಸಬ್‌ ಇನ್‌ಸ್ಪೆಕ್ಟರ್‌ ಅಯ್ಯಪ್ಪ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಕಳೆದ ವಾರ ಹೆಬ್ಬಗೋಡಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಆರೋಪಿ ದರೋಡೆ ಮಾಡಿದ್ದ. ನಟೋರಿಯಸ್ ರೌಡಿಶೀಟರ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ನಾಗೇಶ್ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದ.

ಈ ವೇಳೆ ಸಬ್ ಇನ್‌ಸ್ಪೆಕ್ಟರ್‌ ಅಯ್ಯಪ್ಪ ಫೈರಿಂಗ್ ಮಾಡಿದ್ದಾರೆ. ಆರೋಪಿ ಕಾಲಿಗೆ ಗುಂಡಿಳಿಸಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ