Breaking News

ಸಿಗರೇಟ್ ಸೇದಿರುವ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ – ಬಾಲಕನಿಂದ 120 ಗ್ರಾಂ ಚಿನ್ನ ಲೂಟಿ

Spread the love

ಕೊಪ್ಪಳ: ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿ, ಅದರ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿ ಸುಮಾರು 120 ಗ್ರಾಂ ಚಿನ್ನ ದೋಚಿದ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಕುಷ್ಟಗಿ ಪೊಲೀಸರು ಬಸವರಾಜ್ ಅಂಗಡಿ ಮತ್ತು ನವೀನ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ 120 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಮೊದಲು ಅಪ್ರಾಪ್ತ ಬಾಲಕನಿಗೆ ಸಿಗರೇಟ್ ಸೇದುವುದನ್ನು ಕಲಿಸಿದ್ದರು. ಬಳಿಕ ಅದನ್ನು ವಿಡಿಯೋ ಮಾಡಿ ಇಟ್ಟುಕೊಂಡು, ಈ ವಿಡಿಯೋವನ್ನು ನಿನ್ನ ತಂದೆ-ತಾಯಿಗೆ ತೋರಿಸುತ್ತೇವೆ ಎಂದು ಬೆದರಿಕೆ ಹಾಕಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ಆರೋಪಿಗಳ ಬೆದರಿಕೆಗೆ ಹೆದರಿದ ಬಾಲಕ, ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಒಂದೊಂದಾಗಿ ತೆಗೆದುಕೊಂಡು ಹೋಗಿ ಆರೋಪಿಗಳಿಗೆ ನೀಡಿದ್ದಾನೆ. ಈ ರೀತಿ ಒಟ್ಟು ಸುಮಾರು 120 ಗ್ರಾಂ ಚಿನ್ನವನ್ನು ಬಾಲಕ ಆರೋಪಿಗಳಿಗೆ ನೀಡಿರುವುದು ತನಿಖೆಯಿಂದ ತಿಳಿದುಬಂದಿದೆ. 

ಮನೆಯಲ್ಲಿದ್ದ ಚಿನ್ನಾಭರಣಗಳು ಕಾಣೆಯಾಗುತ್ತಿರುವ ಬಗ್ಗೆ ಅನುಮಾನಗೊಂಡ ಪೋಷಕರು ಕುಷ್ಟಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 120 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣವನ್ನು ಭೇದಿಸಿದ ಕುಷ್ಟಗಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಕೊಪ್ಪಳ ಜಿಲ್ಲಾ ಪೊಲೀಸ್ ಎಸ್‌ಪಿ ಡಾ. ರಾಮ್ ಅರಸಿದ್ದಿ ಶ್ಲಾಘಿಸಿದ್ದಾರೆ. 


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ