Breaking News

ಮಾರಿಕಾಂಬಾ ಕ್ರೀಡಾಂಗಣದ ಬಳಿ ಗಾಂಜಾ ಮಾರುತ್ತಿದ್ದ ಖದೀಮ ಪೊಲೀಸ್ ಬಲೆಗೆ

Spread the love

ಶಿರಸಿ: ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಖದೀಮನೊಬ್ಬನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ರಾಜೀವ ನಗರದ ನಿವಾಸಿ, ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದ ಆನಂದ ಬೋವಿವಡ್ಡರ ಅಲಿಯಾಸ್ ತುರಿಮಣಿ (23) ಬಂಧಿತ ಆರೋಪಿಯಾಗಿದ್ದಾನೆ.

ಮಂಗಳವಾರ ರಾತ್ರಿ 9:15ರ ಸುಮಾರಿಗೆ ಶಿರಸಿಯ ಕಾಲೇಜು ರಸ್ತೆಯ ಮಾರಿಕಾಂಬಾ ಕ್ರೀಡಾಂಗಣದ ಹತ್ತಿರ ವ್ಯಕ್ತಿಯೊಬ್ಬ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದಾನೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಹೆಡೆಮುರಿಕಟ್ಟಿದ್ದಾರೆ.

ಬಂಧಿತ ಆರೋಪಿಯಿಂದ ಪೊಲೀಸರು ಸುಮಾರು 10,400 ರೂ. ಮೌಲ್ಯದ 217 ಗ್ರಾಂ ಗಾಂಜಾ ಮಾದಕ ವಸ್ತು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಶಿರಸಿ ಉಪವಿಭಾಗದ ಡಿವೈಎಸ್ಪಿ ಶ್ರೀಮತಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ ಶಿರಸಿ ವೃತ್ತ ನಿರೀಕ್ಷಕರಾದ ಸಂಪತ್‌ಕುಮಾರ್ ಸಿ. ಅವರ ನೇತೃತ್ವದಲ್ಲಿ, ಹೊಸಮಾರುಕಟ್ಟೆ ಠಾಣೆಯ ಪಿಎಸ್‌ಐ ಬಸವರಾಜ್ ಕನಶೆಟ್ಟಿ ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳಾದ ಸಂದೀಪ್ ನಿಂಬಾಯಿ, ರಾಕೇಶ್ ಎನ್.ಎಚ್., ಸಂತೋಷ್ ಆರ್.ಕೆ., ಅರುಣ್ ಲಮಾಣಿ ಮತ್ತು ಲಕ್ಷ್ಮಣ್ ಅವರು ಭಾಗವಹಿಸಿ ಆರೋಪಿಯನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸ್ ತಂಡದ ಈ ಕಾರ್ಯಕ್ಷಮತೆಗೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ