Breaking News

ಅಮವಾಸ್ಯೆ ಹೂ, ಹಣ್ಣಿಗೆ ಮುಗಿಬಿದ್ದ ಜನ- ಲಾಕ್‍ಡೌನ್ ಮಧ್ಯೆ ಭಕ್ತರಿಂದ ತುಂಬಿದ ದೇವಾಲಯ

Spread the love

ರಾಯಚೂರು: ಭೀಮನ ಅಮವಾಸ್ಯೆ ಹಾಗೂ ಶ್ರಾವಣ ಆರಂಭ ಹಿನ್ನೆಲೆ ರಾಯಚೂರಿನಲ್ಲಿ ಕೊರೊನಾ ಹರಡುವಿಕೆ ಭೀತಿ ಮರೆತು ಭಕ್ತರು ದೇವಾಲಯಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ತೆರಳುತ್ತಿದ್ದಾರೆ.

ನಗರದ ಉರುಕುಂದಿ ಈರಣ್ಣ ದೇವಾಲಯದಲ್ಲಿ ಭಕ್ತರ ದಂಡು ಹರಿದು ಬಂದಿದೆ. ಲಾಕ್‍ಡೌನ್ ಮಧ್ಯೆ ಅಮವಾಸ್ಯೆ ಹಿನ್ನೆಲೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು, ಇದರಿಂದ ದೇವರ ದರ್ಶನಕ್ಕೆ ಭಕ್ತರು ಸಾಲುಗಟ್ಟಿ ನಿಂತಿದ್ದರು. ಸಾಮಾಜಿಕ ಅಂತರ, ಮಾಸ್ಕ್ ಸೇರಿದಂತೆ ಎಲ್ಲವನ್ನೂ ಮರೆತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ.

ಮುನ್ನೆಚ್ಚರಿಕೆಯಾಗಿ ಕೆಲ ದೇವಾಲಯಗಳಿಗೆ ಬೀಗ ಹಾಕಲಾಗಿದೆ. ನಗರದ ಚಂದ್ರಮೌಳೇಶ್ವರ ದೇವಾಲಯ ಸೇರಿ ಕೆಲವಡೆ ಭಕ್ತರಿಗೆ ನಿರ್ಭಂದ ಹೇರಿದ್ದರೂ ಭಕ್ತರು ದೇವಾಲಯಕ್ಕೆ ಬಂದು ಹೋಗುತ್ತಿದ್ದಾರೆ. ಅಮವಾಸ್ಯೆ ನಿಮಿತ್ಯ ತೆಂಗಿನ ಕಾಯಿ, ಹೂ, ಹಣ್ಣು ಖರೀದಿಗೆ ಮಾರ್ಕೆಟ್‍ನಲ್ಲಿ ಜನ ಮುಗಿಬಿದ್ದಿದ್ದರು. ರಾಯಚೂರು, ಸಿಂಧನೂರು ನಗರಗಳಲ್ಲಿ ಜುಲೈ 22ರವರೆಗೆ ಲಾಕ್‍ಡೌನ್ ಇದ್ದರೂ ಜನರಿಗೆ ಯಾವುದೂ ಲೆಕ್ಕಕ್ಕಿಲ್ಲ ಎನ್ನುವಂತಾಗಿದೆ.

ನಗರದ ತೀನ್ ಕಂದಿಲ್‍ನಿಂದ ಸರಫ್ ಬಜಾರ್ ವರೆಗೆ ವ್ಯಾಪರ ಜೋರಾಗಿ ನಡೆದಿತ್ತು. ಜನಸಂದಣಿ ಹೆಚ್ಚಾಗುತ್ತಿದ್ದಂತೆ ಪೊಲೀಸರು ಬಂದು ಜನರನ್ನು ಚದುರಿಸಿದ್ದಾರೆ. ಪೊಲೀಸರಿಗೆ ಹೆದರಿ ಕೆಲ ವ್ಯಾಪಾರಿಗಳು ಅಂಗಡಿಗಳನ್ನು ಹಾಗೇ ಬಿಟ್ಟು ಓಡಿಹೋಗಿದ್ದಾರೆ. ಉಳಿದವರು ವ್ಯಾಪಾರ ನಿಲ್ಲಿಸಿ ಅಂಗಡಿಗಳನ್ನು ಮುಚ್ಚಿದ್ದಾರೆ.


Spread the love

About Laxminews 24x7

Check Also

ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶಿಶುಗಳ ಅದಲು ಬದಲಾದ ಆರೋಪ ಕೇಳಿಬಂದಿದೆ.

Spread the loveರಾಯಚೂರು : ಜಿಲ್ಲೆಯ ಸಿಂಧನೂರು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಇಬ್ಬರು ಮಹಿಳೆಯರಿಗೆ ಹೆರಿಗೆಯಾಗಿದ್ದು, ಇವೆರಡು ಮಕ್ಕಳನ್ನು ಸಿಬ್ಬಂದಿ ಅದಲು-ಬದಲು ಮಾಡಿದ್ದಾರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ