Breaking News

ಕೋವಿಡ್ ಪರಿಕರಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ:ಕಾಂಗ್ರೆಸ್ ನಾಯಕರು, 

Spread the love

ಬೆಂಗಳೂರು:  ಕೋವಿಡ್ ಪರಿಕರಗಳ ಖರೀದಿಯಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್ ನಾಯಕರು,  ಈ  ಹಿಂದೆ ಲೆಕ್ಕ ಕೊಡಿ ಎಂಬ ಅಭಿಯಾನ ಆರಂಭಿಸಿದ್ದರು. ಇದೀಗ ಈ ವಿಚಾರದಲ್ಲಿ ಸರ್ಕಾರದ ವಿರುದ್ದ ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸೋಮವಾರ  ನಡೆದ ಸಭೆಯಲ್ಲಿ ಕೊರೊನಾ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾದ ಕುರಿತು ಪಕ್ಷದ ನಾಯಕರೊಂದಿಗೆ ಚರ್ಚಿಸಿದರು.

ಕೊರೊನಾ ಹೆಸರಲ್ಲಿ ರಾಜ್ಯ ಸರ್ಕಾರ ಲೂಟಿ ಮಾಡುತ್ತಿದೆ. ಖಾಸಗಿ ಆಸ್ಪತ್ರೆಗಳು  ಸಣ್ಣಪುಟ್ಟ ಕಾಯಿಲೆಗಳಿಗೆ ಚಿಕಿತ್ಸೆ ನೀಡುತ್ತಿಲ್ಲ.  ಕೊರೊನಾ ಸೋಂಕಿತರಿಗೂ ಖಾಸಗಿ ಆಸ್ಪತ್ರೆಗಳು ಬೆಡ್ ನೀಡುತ್ತಿಲ್ಲ. ಜನರ ನೋವಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಹೋರಾಟದ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ರಾಜ್ಯದಲ್ಲಿ ಆರ್ಥಿಕ ಸಂಕಷ್ಟ, ಆರೋಗ್ಯ ಸಂಕಷ್ಟವಾಗಿದ್ದು, ವಿರೋಧ ಪಕ್ಷ ಇದರ ವಿರುದ್ದ ಹೋರಾಟ ನಡೆಸಲಿದೆ. ಜಾಗೃತಿ ಮೂಡಿಸಲುವ ಕೆಲಸ ಮಾಡುತ್ತೇವೆ.  ಜನರಿಗಾಗಿ ಸಹಾಯವಾಣಿಯನ್ನು ಆರಂಭಿಸಲಾಗುವುದು ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.

ಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಎಚ್. ಕೆ. ಪಾಟೀಲ್, ಯು.ಟಿ. ಖಾದರ್ ಮಾಜಿ ಸ್ಪೀಕರ್ ರಮೇಶ ಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್, ಈಶ್ವರ ಖಂಡ್ರೆ ಮುಂತಾದವರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ

Spread the loveಬೆಂಗಳೂರು: ದೆಹಲಿಗೆ  ತೆರಳಿರುವ ಡಿಸಿಎಂ ಡಿಕೆಶಿ  ಪರವಾಗಿ ನಾವಿದ್ದೇವೆ. ಅವರು ನಾಳೆನೇ ಬರಲಿ ತೊಂದರೆ ಇಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ