Breaking News

ಚಿಕ್ಕೋಡಿಯಲ್ಲಿ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ದಾಳಿ

Spread the love

ಚಿಕ್ಕೋಡಿಯಲ್ಲಿ ರೌಡಿಶೀಟರ್‌ಗಳ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪಟ್ಟಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುರುತಿಸಲ್ಪಟ್ಟ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

DySP ಅವರ ಮಾರ್ಗದರ್ಶನದಲ್ಲಿ ಸಿಪಿಐ, ನೇತೃತ್ವದಲ್ಲಿ ಪಿಎಸ್‌ಐ, ಹಾಗೂ ಪೊಲೀಸ್ ಸಿಬ್ಬಂದಿಇಂದ ಈ ಕಾರ್ಯಾಚರಣೆ ನಡೆಸಿದ್ದಾರೆ.

ಒಟ್ಟು 7 ರೌಡಿಶೀಟರ್‌ಗಳ ಮನೆಗಳಿಗೆ ಭೇಟಿ ನೀಡಿ ಅವರ ಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗಿದೆ.

ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಆರೋಪ ಹೊಂದಿರುವ ರೌಡಿಶೀಟರ್‌ಗಳ ಮೇಲೆ ನಿಗಾ ವಹಿಸಿರುವ ಪೊಲೀಸರು, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಈ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೆ, ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಿರುವ ಪೊಲೀಸರು, ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ