Breaking News

ದೆಹಲಿಯಿಂದ ಹೊರಟ ತ.ನಾಡು ಸಿಎಂ ವಿಜಯ್‌; ಉಡುಪಿಯತ್ತ ಪ್ರಯಾಣ

Spread the love

ನವದೆಹಲಿ: ಮೂರು ದಿನಗಳ ಅಧಿಕೃತ ಭೇಟಿಯನ್ನು ಮುಗಿಸಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್‌ ವಿಜಯ್‌  ಅವರು ದೆಹಲಿಯಿಂದ ಹೊರಟಿದ್ದಾರೆ. ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲು ಉಡುಪಿಯತ್ತ ಸಿಎಂ ಪ್ರಯಾಣ ಬೆಳೆಸಿದ್ದಾರೆ

ಇಂದು ಬೆಳಗ್ಗೆ ಸಿಎಂ ವಿಜಯ್‌ ಅವರು ದೆಹಲಿಯ ತಮಿಳುನಾಡು ಭವನದಿಂದ ಹೊರಟರು. ಬಳಿಕ ದೆಹಲಿ ಏರ್‌ಪೋರ್ಟ್‌ಗೆ ಬಂದು ಇಳಿದಿದ್ದು, ಕರ್ನಾಟಕದ ಮಂಗಳೂರಿನ ಕಡೆ ಪ್ರಯಾಣ ಬೆಳೆಸಲಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಸಿಎಂ ವಿಜಯ್‌ ಉಡುಪಿಯಲ್ಲಿ ಕೊಲ್ಲೂರು ಮೂಕಾಂಬಿಕಾ  ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಲಿದ್ದಾರೆ. ಬಳಿಕ ತಮಿಳುನಾಡಿಗೆ ವಾಪಸ್‌ ಆಗಲಿದ್ದಾರೆ.
ಜೂ.10 ರಿಂದ ಮೂರು ದಿನಗಳ ಕಾಲ ತಮಿಳುನಾಡು ಸಿಎಂ ವಿಜಯ್‌ ದೆಹಲಿ ಪ್ರವಾಸ ಕೈಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಸಿಎಂ ಭಾಗವಹಿಸಿದ್ದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ