Breaking News

ಪರಿಹಾರ ನೀಡಲು KKRTC ಹಿಂದೇಟು: ಕೋರ್ಟ್‌ ಆದೇಶ ಉಲ್ಲಂಘಿಸಿದ್ದಕ್ಕೆ ಎರಡು ಸಾರಿಗೆ ಬಸ್‌ ಸೀಜ್‌

Spread the love

ಬೀದರ್: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ನ್ಯಾಯಾಲಯದ ಆದೇಶದಂತೆ ಪರಿಹಾರ ನೀಡಲು ಹಿಂದೇಟು ಹಾಕಿದ್ದ ಹಿನ್ನೆಲೆಯಲ್ಲಿ ಎರಡು ಸಾರಿಗೆ ಬಸ್‌ಗಳನ್ನು ಜಪ್ತಿ ಮಾಡಿದ ಘಟನೆ ಬೀದರ್  ಜಿಲ್ಲೆಯ ಔರಾದ್‌ನಲ್ಲಿ ನಡೆದಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಔರಾದ್ ಡಿಪೋದ ಎರಡು ಬಸ್‌ಗಳನ್ನು ಜಪ್ತಿ ಮಾಡಲಾಗಿದೆ. ಔರಾದ್ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಆದೇಶದ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಜಪ್ತಿ ಮಾಡಲಾದ ಎರಡು ಬಸ್‌ಗಳನ್ನು ನ್ಯಾಯಾಲಯದ ಆವರಣದಲ್ಲಿ ನಿಲ್ಲಿಸಲಾಗಿದೆ.

2024ರ ಫೆಬ್ರವರಿ 28ರಂದು ಕಮಲನಗರ ಸಮೀಪ ಕೆಕೆಆರ್‌ಟಿಸಿ ಬಸ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದರು. ಈ ಪ್ರಕರಣದಲ್ಲಿ ಮೃತಪಟ್ಟ ವೀರಭದ್ರ ಅವರ ಪತ್ನಿ ಸುವರ್ಣ ಅವರು ಪರಿಹಾರ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಸುವರ್ಣ ಅವರಿಗೆ ಒಟ್ಟು 36 ಲಕ್ಷ 63 ಸಾವಿರ ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿತ್ತು. ಆದರೆ ನ್ಯಾಯಾಲಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಎರಡು ಸಾರಿಗೆ ಬಸ್‌ಗಳನ್ನು ಜಪ್ತಿ ಮಾಡಲು ನ್ಯಾಯಾಲಯ ಆದೇಶ ನೀಡಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ