Breaking News

ಎಐ ಬಳಸಿ ಯುವತಿಯ ಅಶ್ಲೀಲ ವಿಡಿಯೋ, ಹಣಕ್ಕೆ ಡಿಮ್ಯಾಂಡ್​​: ಇಬ್ಬರು ಆರೋಪಿಗಳು ಅಂದರ್​​

Spread the love

ಚಿಕ್ಕಮಗಳೂರು: ಯುವತಿಯೋರ್ವಳ ಫೋಟೋವನ್ನು ಪೇಸ್​​ಬುಕ್​ನಿಂದ ಪಡೆದು ಅದನ್ನು ಬಳಸಿ ಅಶ್ಲೀಲ ವಿಡಿಯೋ ಕ್ರಿಯೇಟ್ ಮಾಡಿ ಹಣಕ್ಕೆ ಬ್ಲ್ಯಾಕ್​​ಮೇಲ್​​ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. AI, ವಿಡಿಯೋ ಎಡಿಟಿಂಗ್ ಅಪ್ಲಿಕೇಶನ್ ಬಳಸಿ ಮಾಡಿದ ವಿಡಿಯೋವನ್ನು ಯುವತಿಯ ತಾಯಿಗೆ ಕಳುಹಿಸಿದ್ದ ಆರೋಪಿಗಳು, ದುಡ್ಡಿಗಾಗಿ ಪೀಡಿಸಿದ್ದರು. ಹಣ ನೀಡದಿದ್ದರೆ ಜಾಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದರು. ನೊಂದ ಯುವತಿಯ ಕಡೆಯವರು ಲಕ್ಕವಳ್ಳಿ ಪೊಲೀಸರಿಗೆ ನೀಡಿದ್ದ ದೂರಿನ ಅಧಾರದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅಕ್ಷಯ್ ಹಾಗೂ ಸಾಹುಲ್ ಎಂಬವರನ್ನು ಅರೆಸ್ಟ್​​ ಮಾಡಲಾಗಿದೆ.

ಬಾವಿಕೆರೆ ಗ್ರಾಮದ 25 ವರ್ಷದ ಯುವತಿಯ ಪೋಟೋವನ್ನ ಫೇಸ್ಬುಕ್​​ನಿಂದ ಪಡೆದುಕೊಂಡಿದ್ದ ಆರೋಪಿಗಳು ಅಶ್ಲೀಲ ವಿಡಿಯೋ ಕ್ರಿಯೇಟ್ ಮಾಡಿದ್ದರು. ಆ ಬಳಿಕ ಯುವತಿಯ ತಾಯಿಗೆ ಬೆಂಗಳೂರು ಮೂಲದ ಯೋಗೇಶ್ ಎಂಬ ಹೆಸರಿನಲ್ಲಿ ಪದೇಪದೇ ಕರೆ ಮಾಡಿ ಹಣ ಕೇಳಿದ್ದರು. ಆರೋಪಿಗಳು ನಿರಂತರ ಬ್ಲ್ಯಾಕ್​​ಮೇಲ್​​ ಮಾಡಲಾರಂಭಿಸಿದಾಗ ಯುವತಿ ಕಡೆಯವರು ಈ ಸಂಬಂಧ ಯೋಗೇಶ್​​ ಎಂಬ ಹೆಸರನ್ನೇ ಉಲ್ಲೇಖಿಸಿ ದೂರು ನೀಡಿದ್ದರು. ಆದರೆ ಪೊಲೀಸ್​​ ತನಿಖೆ ವೇಳೆ ಆರೋಪಿಗಳ ಕಳ್ಳಾಟ ಬಯಲಾಗಿದ್ದು, ಹಣಕ್ಕಾಗಿ ಬ್ಲ್ಯಾಕ್​​ಮೇಲ್​​ ಮಾಡುತ್ತಿದ್ದ ಅಸಲಿ ಆರೋಪಿಗಳು ಅದೇ ಬಾವಿಕೆರೆ ಗ್ರಾಮದ ಸಾಹುಲ್ ಮತ್ತು ಅಕ್ಷಯ್​​ ಎಂಬುದು ಗೊತ್ತಾಗಿದೆ.

ಇನ್ನು ಆರೋಪಿಗಳು ಮೈತುಂಬ ಸಾಲಮಾಡಿಕೊಂಡಿದ್ದರು. ಹೀಗಾಗಿ ಹೇಗಾದರೂ ಹಣ ಮಾಡಬೇಕೆಂಬ ಆಸೆಗೆ ಬಿದ್ದು ಈ ರೀತಿಯ ಕೆಲಸಕ್ಕೆ ಕೈಹಾಕಿದ್ದರು. ಈ ವಿಚಾರವನ್ನು ಆರೋಪಿಗಳು ಪೊಲೀಸರ ಮುಂದೆ ಒಪ್ಪಿಕೊಂಡಿದ್ದು, ಮಾಡಬಾರದ್ದು ಮಾಡಲು ಹೋದವರೀಗ ಜೈಲು ಸೇರಿದ್ದಾರೆ. ಒಳ್ಳೆ ಕೆಲಸಗಳಿಗೆ ಬಳಕೆಯಾಗಬೇಕಿದ್ದ ತಂತ್ರಜ್ಞಾನವನ್ನು ಇಂತಹ ಕೆಟ್ಟ ಕೆಲಸಕ್ಕೆ ಬಳಕೆ ಮಾಡಿಕೊಂಡು ಹಣ ಮಾಡಲು ಹೋದವರೀಗ ತಕ್ಕ ಶಾಸ್ತಿಯಾಗಿದೆ ಎಂಬ ಮಾತುಗಳು ಗ್ರಾಮದಲ್ಲಿ ಕೇಳಿಬಂದಿವೆ.


Spread the love

About Laxminews 24x7

Check Also

ರೈತರ ವಿರೋಧದ ನಡುವೆಯೂ ಸರ್ಕಾರ ದಬ್ಬಾಳಿಕೆ ಮಾಡುತ್ತಿದೆ: ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ಹೆಚ್‌ಡಿಕೆ ಆಕ್ರೋಶ

Spread the loveಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿರುವುದನ್ನು ಖಂಡಿಸಿದ ಕೇಂದ್ರ ಸಚಿವ ಹೆಚ್‌.ಡಿ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ