Breaking News

ಮತ್ತೆ ಸದ್ದು ಮಾಡಿದ ಮುತ್ತಪ್ಪ ರೈ ಪುತ್ರನ ಲ್ಯಾಂಬೋರ್ಗಿನಿ – ಏರ್‌ಪೋರ್ಟ್ ರಸ್ತೆಯಲ್ಲಿ ಪುಂಡಾಟದ ವಿಡಿಯೋ ವೈರಲ್

Spread the love

ಬೆಂಗಳೂರು: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಒಡೆತನದ ಲ್ಯಾಂಬೋರ್ಗಿನಿ ಕಾರು ಮತ್ತೊಮ್ಮೆ ಸುದ್ದಿಯಲ್ಲಿದೆ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯಲ್ಲಿ ಡ್ರಿಫ್ಟಿಂಗ್ ಮಾಡುವ ಮೂಲಕ, ಸೈಲೆನ್ಸರ್‌ನಿಂದ ಬೆಂಕಿ ಉಗುಳುತ್ತಾ ಕರ್ಕಶ ಶಬ್ದ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರಿನ ವಿಡಿಯೋ ಇದೀಗ ಪೊಲೀಸರ ಗಮನ ಸೆಳೆದಿದೆ. ವೈರಲ್ ವಿಡಿಯೋ ಆಧರಿಸಿ ಘಟನೆ ಯಾವ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎಂಬುದನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಮೊದಲು ಕಾರಿನ ವಿರುದ್ಧ ಪ್ರಕರಣ ದಾಖಲಿಸಿ, ಬಳಿಕ ತನಿಖೆ ಮುಂದುವರಿಸಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ. ಕಾರು ಯಾವಾಗ ಚಲಾಯಿಸಲಾಗಿದೆ? ಆ ವೇಳೆ ಕಾರಿನಲ್ಲಿದ್ದವರು ಯಾರು? ವಾಹನ ಚಲಾಯಿಸಿದ್ದು ಯಾರು ಎಂಬುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ.

ಈ ಕಾರು ಇದೇ ಮೊದಲ ಬಾರಿಗೆ ವಿವಾದಕ್ಕೆ ಸಿಲುಕಿಲ್ಲ. ಕಳೆದ ಮಾರ್ಚ್ 21ರಂದು ಎಂಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಹಾಗೂ ಕಬ್ಬನ್ ರಸ್ತೆಯಲ್ಲಿ ಇದೇ ಲ್ಯಾಂಬೋರ್ಗಿನಿ ಕಾರಿನಿಂದ ಡ್ರಿಫ್ಟಿಂಗ್ ಮಾಡಲಾಗಿತ್ತು. ಆ ವೇಳೆ ರಿಕ್ಕಿ ರೈ ಕಾರು ಚಲಾಯಿಸುತ್ತಿದ್ದರೆಂದು ಸಿಸಿಟಿವಿ ಪರಿಶೀಲನೆಯಲ್ಲಿ ಪತ್ತೆಯಾಗಿತ್ತು.

ಆರಂಭದಲ್ಲಿ ಅದು ನಾನಲ್ಲ ಎಂದು ರಿಕ್ಕಿ ರೈ ಹೇಳಿಕೊಂಡಿದ್ದರು. ಆದರೆ ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಅವರೇ ಕಾರು ಚಲಾಯಿಸಿದ್ದು ದೃಢಪಟ್ಟಿತ್ತು. ಈ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ರಿಕ್ಕಿ ರೈ ಪರ ವಕೀಲರು, ರಸ್ತೆ ಸರಿಯಾಗಿರಲಿಲ್ಲ. ಅದರಿಂದ ಕಾರು ಸ್ಕಿಡ್ ಆಗಿದೆ ಎಂದು ವಾದ ಮಂಡಿಸಿದ್ದರು. ಬಳಿಕ ರಿಕ್ಕಿ ರೈ ನ್ಯಾಯಾಲಯದಲ್ಲಿ ದಂಡ ಪಾವತಿಸಿದ್ದರು. ಇದೀಗ ಅದೇ ಕಾರು ಮತ್ತೆ ಏರ್‌ಪೋರ್ಟ್ ರಸ್ತೆಯಲ್ಲಿ ಪುಂಡಾಟ ನಡೆಸಿರುವ ಆರೋಪ ಕೇಳಿಬಂದಿದ್ದು, ಪೊಲೀಸರು ವಿಡಿಯೋ ಪರಿಶೀಲನೆ ನಡೆಸುತ್ತಿದ್ದಾರೆ.

ಪರಿಶೀಲನೆ ವೇಳೆ ನಿಯಮ ಉಲ್ಲಂಘನೆ ದೃಢಪಟ್ಟರೆ ಅತಿವೇಗದ ಚಾಲನೆ, ಸೈಲೆನ್ಸರ್ ಮಾಡಿಫೈಡ್, ಸೈಲೆನ್ಸರ್‌ನಿಂದ ಬೆಂಕಿ ಉಗುಳಿಸುವುದು ಹಾಗೂ ಕರ್ಕಶ ಶಬ್ದ ಸೃಷ್ಟಿಸಿದ ಆರೋಪಗಳಡಿ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ


Spread the love

About Laxminews 24x7

Check Also

ಮಾಜಿ ಸೈನಿಕನ ಕೊಲೆ ರಹಸ್ಯ ಬಯಲು!

Spread the loveಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಮಾಜಿ ಸೈನಿಕ ಸಂದೀಪ್ ಮಂಜರಗಿ (46) ಕೊಲೆ ಪ್ರಕರಣ ರಹಸ್ಯ ಬಯಲಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ