Breaking News

ಸಾವಿನ ವದಂತಿ ಬೆನ್ನಲ್ಲೇ ಆಂಜನೇಯನ ಮೊರೆ ಹೋದ ನಟ ದೊಡ್ಡಣ್ಣ

Spread the love

ಬೆಂಗಳೂರು: ಸಾವಿನ ಸುದ್ದಿ ವದಂತಿ ಬೆನ್ನಲ್ಲೇ ಕಂಟಕ ಪರಿಹಾರಕ್ಕಾಗಿ ನಟ ದೊಡ್ಡಣ್ಣ ಅವರು ಆಂಜನೇಯ ದೇವರ ಮೊರೆ ಹೋಗಿದ್ದಾರೆ. ಕಂಟಕ ಪರಿಹಾರಕ್ಕಾಗಿ ದೊಡ್ಡಣ್ಣ  ಕುಟುಂಬ ಸಮೇತರಾಗಿ ಮಹಾಲಕ್ಷ್ಮಿ ಲೇಔಟ್‌ನ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನಿನ್ನೆ ಶುಕ್ರವಾರ ಬೆಳಗ್ಗೆ ಕೆಲ ಕಿಡಿಗೇಡಿಗಳು ಹಿರಿಯ ನಟ ದೊಡ್ಡಣ್ಣ ಬಗ್ಗೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು. ಈ ಸುದ್ದಿ ಅಭಿಮಾನಿಗಳು ಹಾಗೂ ಆಪ್ತರಲ್ಲಿ ಆತಂಕ ಮೂಡಿಸಿತ್ತು.

ಈ ಕುರಿತು ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದ ದೊಡ್ಡಣ್ಣ, ನಾನು ಆರೋಗ್ಯವಾಗಿದ್ದೇನೆ. ಬೆಳಗ್ಗೆ ನಾನು ಎದ್ದೇಳುವ ಮುಂಚೆಯೇ ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಅದು ಸಂಪೂರ್ಣ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ನಿಮ್ಮೆಲ್ಲರ ಆಶೀರ್ವಾದ ಇರುವವರೆಗೆ ನಾನು ಚೆನ್ನಾಗಿರುತ್ತೇನೆ ಎಂಬ ನಂಬಿಕೆ ಇದೆ. ನನ್ನ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರನ್ನು ಸುಮ್ಮನೆ ಬಿಡುವುದಿಲ್ಲ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತೇನೆ ಎಂದು ದೊಡ್ಡಣ್ಣ ಎಚ್ಚರಿಕೆಯನ್ನೂ ಸಹ ನೀಡಿದ್ದಾರೆ.

ಇದರ ಬೆನ್ನಲ್ಲೇ ಇಂದು ಮಹಾಲಕ್ಷ್ಮಿ ಲೇಔಟ್ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕುಟುಂಬದೊಂದಿಗೆ ದೇವರ ಆಶೀರ್ವಾದ ಪಡೆದಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ