Breaking News

ತುಷ್ಪಥ ರಸ್ತೆ ಕಾಮಗಾರಿ ವೀಕ್ಷಿಸಿದ ಸಂಸದ ಶೆಟ್ಟರ್

Spread the love

ಬೆಳಗಾವಿ: ಬೆಳಗಾವಿ- ಹುನಗುಂದ – ರಾಯಚೂರು  ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ನಿರ್ಮಿಸುತ್ತಿರುವ ಚತುಷ್ಪಥ ರಸ್ತೆಯ ಕಾಮಗಾರಿಯ ಪ್ರಗತಿಯ ಕುರಿತು ತಿಳಿಯಲು ಬೆಳಗಾವಿ ಸಂಸದ ಜಗದೀಶ ಶೆಟ್ಟರ ಇವರು ಇಂದು ಸ್ಥಳಕ್ಕೆ ಭೇಟಿ ನೀಡಿ, ವೀಕ್ಷಿಸಿದರು.

ಬೆಳಗಾವಿ ಶೇಗಣಮಟ್ಟಿ ಗ್ರಾಮದ ಹತ್ತಿರದಿಂದ ಪ್ಯಾಕೇಜ -1 ರಡಿ 42 ಕಿ.ಮಿ ರಸ್ತೆ ನಿರ್ಮಾಣವಾಗುತ್ತಿದ್ದು, ಈ ಕಾಮಗಾರಿ ಸ್ಥಳ ವೀಕ್ಷಣೆಯನ್ನು ಸಂಸದರಾದ ಜಗದೀಶ ಶೆಟ್ಟರ ಇವರು ಕೈಕೊಂಡರು.

ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಸ ಪಾಟೀಲ, ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷರಾದ ಗೀತಾ ಸುತಾರ, ಪಕ್ಷದ ಮುಖಂಡರಾದ ಮಾರುತಿ ಜಿರಲಿ,  ಆರ್.ಎಸ್ ಮುತಾಲಿಕ, ರಮೇಶ ದೇಶಪಾಂಡೆ ಮುರಗೇಂದ್ರಗೌಡ ಪಾಟೀಲ, ಹಾಗೂ ಇತರೆ ಪದಾಧಿಕಾರಿಗಳು ಭಾಗವಹಿಸಿದ್ದರು.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಭಿಯಂತರರಾದ  ಕಿಶೋರ ಮತ್ತು ಕಿರಿಯ ಅಧಿಕಾರಿಗಳು ಪ್ರಸ್ತಾಪಿತ ಯೋಜನೆಯ ವಿವರಗಳನ್ನು ಸಂಸದರಾದ ಜಗದೀಶ ಶೆಟ್ಟರ ಅವರೊಂದಿಗೆ ಹಂಚಿಕೊಂಡರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ