Breaking News

ತೆರೆದ ಬಾವಿಗೆ ಬಿದ್ದ ಪಿಕ್ ಅಪ್ ವಾಹನ – ಮಹಿಳೆಯರು, ಮಕ್ಕಳು ಸೇರಿ 8 ಮಂದಿ ದುರ್ಮರಣ

Spread the love

ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ  ಪರಿಣಾಮ ನಾಲ್ವರು ಮಹಿಳೆಯರು ಮತ್ತು ನಾಲ್ವರು ಮಕ್ಕಳು ಸೇರಿ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ  ಸೋಲಾಪುರ  ಜಿಲ್ಲೆಯ ಮಲ್ಶಿರಾಸ್ ತಹಸಿಲ್‌ನಲ್ಲಿ ನಡೆದಿದೆ. ಈ ಅಪಘಾತದಲ್ಲಿ ಏಳು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಂಢರಪುರ ಮೂಲದ 15 ಜನರು ಮಾಸ್ವಾಡ್‌ನ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಈ ವೇಳೆ ತಂಡುಲ್ವಾಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಪಿಕಪ್‌ನಲ್ಲಿ ಇದ್ದವರು ಹೆಚ್ಚಿನವರು ಸಂಬಂಧಿಕರು ಮತ್ತು ನೆರೆಹೊರೆಯವರು ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, 15 ಜನರನ್ನು ಹೊತ್ತೊಯ್ಯುತ್ತಿದ್ದ ಪಿಕ್-ಅಪ್ ವಾಹನವು ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ, ರಸ್ತೆಬದಿಯ ಜಮೀನಿಗೆ ನುಗ್ಗಿ ಬಾವಿಗೆ ಬಿದ್ದಿದೆ. ಇದರಿಂದಾಗಿ 8 ಮಂದಿ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸೋಲಾಪುರದ ಪೊಲೀಸ್ ವರಿಷ್ಠಾಧಿಕಾರಿ ಅತುಲ್ ಕುಲಕರ್ಣಿ ತಿಳಿಸಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೊಷಿಸಿದ್ದಾರೆ.

ಸೋಲಾಪುರ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಸೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ