Breaking News

ಸಂಪ್‌ಗೆ ಬಿದ್ದು ಮಗು ಸಾವು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Spread the love

ಕೋಲಾರ: ಮನೆ ಬಳಿಯ ಸಂಪ್‌ಗೆ  ಬಿದ್ದು ಮಗು ಸಾವನ್ನಪ್ಪಿದ ಘಟನೆ ಕೋಲಾರದ ಕಾರಂಜಿಕಟ್ಟೆ ಬಡಾವಣೆಯ 10ನೇ ಕ್ರಾಸ್‌ನಲ್ಲಿ ನಡೆದಿದೆ.

ನಗರದ ವಿಕಾಸ್ ಹಾಗೂ ಹಂಸ ದಂಪತಿ ಪುತ್ರ ಯಶಸ್ (3) ಮೃತಪಟ್ಟ ಮಗು. ಮಗು ಅಂಗಳದಲ್ಲಿ ಆಟವಾಡುವಾಗ ಆಕಸ್ಮಿಕವಾಗಿ ಸಂಪ್‌ಗೆ ಬಿದ್ದಿದೆ. ಈ ವೇಳೆ ತಕ್ಷಣ ನೀರಿನಿಂದ ಮಗುವನ್ನು ಹೊರತೆಗೆದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲೇ ಮಗು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಗಲ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ