Breaking News

ಬೆಂಗಳೂರಲ್ಲಿ ಪ್ರಿಯತಮೆಯ ಕತ್ತು ಹಿಸುಕಿ ಕೊಲೆ – ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ

Spread the love

ಬೆಂಗಳೂರು: ಭಗ್ನಪ್ರೇಮಿಯೊಬ್ಬ ಯುವತಿಯ ಕತ್ತುಹಿಸುಕಿ, ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ತಿಗಳರಪಾಳ್ಯ ತುಳಸಿನಗರದಲ್ಲಿ ನಡೆದಿದೆ.

ಭವಾನಿ (22) ಭಗ್ನಪ್ರೇಮಿಯಿಂದ ಕೊಲೆಯಾದ ಯುವತಿ. ಚಂದ್ರಶೇಖರ್ ಕೊಲೆ ಆರೋಪಿ.

ಮೊಬೈಲ್‌ ಶೋ ರೂಮ್‌ನಲ್ಲಿ ಕೆಲಸ ಮಾಡುತ್ತಿದ್ದ ಭವಾನಿಗೆ, ಕೆಲಸದ ಸ್ಥಳದಲ್ಲೇ ಚಂದ್ರಶೇಖರ್‌ನ ಪರಿಚಯವಾಗಿತ್ತು. ಇಬ್ಬರ ನಡುವಿನ ಸ್ನೇಹ ಪ್ರೀತಿಗೆ ತಿರುಗಿತ್ತು. ಪ್ರೀತಿಯ ವಿಚಾರ ತಿಳಿದ ಭವಾನಿಗೆ ಮನೆಯಲ್ಲಿ ಬೇರೆ ಹುಡುಗನೊಂದಿಗೆ ಮದ್ವೆ ಮಾಡಲು ಮುಂದಾಗಿದ್ದರು. ಈ ವಿಚಾರ ತಿಳಿದ ಚಂದ್ರಶೇಖರ್‌, ಭವಾನಿ ವಾಸಿಸುತ್ತಿದ್ದ ರೂಮ್‌ಗೆ ಹೋಗಿದ್ದಾನೆ. ಆಕೆಯ ಕತ್ತುಹಿಸುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ವಿಷ ಸೇವಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಇತ್ತ ಪದೇ ಪದೇ ಫೋನ್‌ ಮಾಡಿದ್ರೂ ರಿಸೀವ್‌ ಮಾಡದೇ ಇದ್ದರಿಂದ ಅನುಮಾನಗೊಂಡಿ ಭವಾನಿ ಕುಟುಂಬಸ್ಥರು ಮನೆ ಮಾಲೀಕರಿಗೆ ವಿಷಯ ತಿಳಿಸಿದ್ದಾರೆ. ಮನೆ ಮಾಲೀಕರು ರೂಮ್‌ ಬಳಿ ಹೋಗಿ ನೋಡಿದಾಗ ಚಂದ್ರಶೇಖರ್‌ ನರಳಾಡುತ್ತಿದ್ದದ್ದು ಕಂಡುಬಂದಿದೆ. ಆತಂಕದಲ್ಲಿ ಬಾಗಿಲು ಒಡೆದು ನೋಡಿದಾಗ ಭವಾನಿ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಇನ್ನೂ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬೇಕಾಬಿಟ್ಟಿ ಗ್ಯಾರಂಟಿ ಕೊಡೋದ್ರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತೆ: ನಿರ್ಮಲಾ ಸೀತಾರಾಮನ್‌

Spread the loveಚಿಕ್ಕಬಳ್ಳಾಪುರ: ಬೇಕಾಬಿಟ್ಟಿ ಗ್ಯಾರಂಟಿಗಳನ್ನ  ಕೊಡುವುದರಿಂದ ಆರ್ಥಿಕತೆ ಮೇಲೆ ಪರಿಣಾಮ ಬೀರುತ್ತದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ