Breaking News

ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಪ್ರೇಯಸಿಯ ಕೊಲೆ

Spread the love

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.

ಸಿಕ್ಕಿಂ ಮೂಲದ 22 ವರ್ಷದ ಐಪಿ ಹಂಗ್ಮಾ ಮೃತ ಯುವತಿ. ಪ್ರಿಯಕರ ಫುರ್ಬಾ ಲೇಪ್ಸಾ ಕೊಲೆಗೈದ ಆರೋಪಿ.

ಇಬ್ಬರೂ ಮೂಲತಃ ಸಿಕ್ಕಿಂ ನಿವಾಸಿಗಳಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದರು. ಪ್ರೀತಿಯ ವಿಚಾರವಾಗಿ ಇಬ್ಬರ ನಡುವೆ ಮನಸ್ತಾಪ ಉಂಟಾಗಿತ್ತು ಎನ್ನಲಾಗಿದೆ.

ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಕೋಪಗೊಂಡ ಫುರ್ಬಾ ಲೇಪ್ಸಾ, ಯುವತಿಯ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡ ಐಪಿ ಹಂಗ್ಮಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ಳಂದೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ