Breaking News

ರಸ್ತೆಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸಾವು, ಐವರಿಗೆ ಗಾಯ

Spread the love

ರಾಯಚೂರು: ರಸ್ತೆಬದಿ ನಿಂತಿದ್ದ ಲಾರಿಗೆ  ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ನಿವೃತ್ತ ಉಪನ್ಯಾಸಕ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ರಾಯಚೂರು  ಗಡಿ ತೆಲಂಗಾಣದ ಗುಡೆಬಲ್ಲೂರು ಗ್ರಾಮದ ಬಳಿ ನಡೆದಿದೆ.

ಟೈಯರ್ ರೋಡ್‌ನಲ್ಲಿ ಅಪಘಾತ ಸಂಭವಿಸಿದ್ದು, ರಾಯಚೂರಿನ ನಿವೃತ್ತ ಉಪನ್ಯಾಸಕ ಶೇಖರಪ್ಪ ಗೌಡ (70) ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾದಗಿರಿಯಲ್ಲಿನ ಮನೆ ದೇವರು ಕಾಳಬೆಳಗುಂದಿ ಬನದೇಶ್ವರ ದೇವಾಲಯಕ್ಕೆ ತೆರಳಿದ್ದ ಕುಟುಂಬ ವಾಪಸ್ ರಾಯಚೂರಿಗೆ ಮರಳುವಾಗ ಅಪಘಾತ ನಡೆದಿದೆ.

ಅಪಘಾತದಲ್ಲಿ ಶೇಖರಪ್ಪ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಕೃಷ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಆಕ್ರೋಶ: ಪಾದರಾಯನಪುರದಲ್ಲಿ ಜಮೀರ್ ಬೆಂಬಲಿಗರ ಪ್ರತಿಭಟನೆ, ಇಮ್ರಾನ್ ಪಾಷಾ ವಶಕ್ಕೆ

Spread the loveಬೆಂಗಳೂರು: ರಾಜ್ಯ ಸಚಿವ ಸಂಪುಟದ ಮೊದಲ ಹಂತದಲ್ಲಿ ಶಾಸಕ ಜಮೀರ್ ಅಹಮ್ಮದ್ ಖಾನ್ ಅವರಿಗೆ ಸಚಿವ ಸ್ಥಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ