Breaking News

ಶಾಸಕ ಇಕ್ಬಾಲ್ ಹುಸೇನ್‌ಗೆ ಎದೆನೋವು; ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಸಿಎಂ

Spread the love

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಶಾಸಕರ ಆರೋಗ್ಯ ವಿಚಾರಿಸಿದ್ದಾರೆ.

ಮುಖ್ಯಮಂತ್ರಿಯವರೊಂದಿಗೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕೂಡ ಆಸ್ಪತ್ರೆಗೆ ಆಗಮಿಸಿ ಶಾಸಕರ ಆರೋಗ್ಯ ವಿಚಾರಿಸಿದರು. ಕಳೆದ ಎರಡು ದಿನಗಳಿಂದ ಎದೆನೋವು ಕಾಣಿಸಿಕೊಂಡಿದ್ದರಿಂದ ಇಕ್ಬಾಲ್ ಹುಸೇನ್ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಅವರ ಆರೋಗ್ಯ ತಪಾಸಣೆ ನಡೆಸಿ ಆಂಜಿಯೋಗ್ರಾಂ ಪರೀಕ್ಷೆ ಮಾಡಿದ್ದಾರೆ.

ಇಕ್ಬಾಲ್ ಹುಸೇನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಶ್ರೀನಿವಾಸ್ ಮಾತನಾಡಿ, ಆಂಜಿಯೋಗ್ರಾಂ ವೇಳೆ ರಕ್ತನಾಳಗಳಲ್ಲಿ ಬ್ಲಾಕ್ ಇರುವುದನ್ನು ಪತ್ತೆ ಮಾಡಲಾಗಿದೆ. ಅಗತ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮುಂದಿನ ಹಂತದಲ್ಲಿ ಬೈಪಾಸ್ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಶಸ್ತ್ರಚಿಕಿತ್ಸೆಯ ಬಳಿಕ ಸುಮಾರು 10 ದಿನಗಳ ಕಾಲ ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸದ್ಯ ಶಾಸಕರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರ ನಿಗಾದಲ್ಲಿದ್ದಾರೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ